ದೇಶ

ಉತ್ತರ ಪ್ರದೇಶ: ಹದಿಹರೆಯದ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಪೊಲೀಸ್ ಕಾನ್‌ಸ್ಟೆಬಲ್

ಆರೋಪಿ ಕಾನ್‌ಸ್ಟೆಬಲ್‌ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಉತ್ತರ ಪ್ರದೇಶ: ಹದಿಹರೆಯದ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಪೊಲೀಸ್ ಕಾನ್‌ಸ್ಟೆಬಲ್
ಸಾಂದರ್ಭಿಕ ಚಿತ್ರ
Published On :

ಫರೂಕಾಬಾದ್: ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು 16 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಆರೋಪಿ ಕಾನ್‌ಸ್ಟೆಬಲ್‌ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬುಧವಾರ ನವಾಬ್‌ಗಂಜ್ ಪ್ರದೇಶದಲ್ಲಿ 11ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಡುಗಿ ಶಾಲೆಯಿಂದ ಮನೆಗೆ ಹಿಂತಿರುಗದಿದ್ದಾಗ, ಆಕೆಯ ಕುಟುಂಬ ಸದಸ್ಯರು ಅವಳನ್ನು ಹುಡುಕಲು ಆರಂಭಿಸಿದರು. ಈ ವೇಳೆ ಕಾನ್‌ಸ್ಟೆಬಲ್ ವಿನಯ್ ಚೌಹಾಣ್ ಅವರ ಕಾರಿನಲ್ಲಿ ತನ್ನ ಮಗಳನ್ನು ನೋಡಿರುವುದಾಗಿ ಹುಡುಗಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

ಈ ಹಿಂದೆ ನವಾಬ್‌ಗಂಜ್ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದ ಚೌಹಾಣ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುವ ಜವಾಬ್ದಾರಿಯನ್ನು ವೃತ್ತ ಅಧಿಕಾರಿ ರಾಜೇಶ್ ದ್ವಿವೇದಿ ಅವರಿಗೆ ವಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆರತಿ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.