ಬಿಹಾರ: ಗುಂಡಿಟ್ಟು ಉದ್ಯಮಿ, ಬಿಜೆಪಿ ನಾಯಕನ ಹತ್ಯೆ!
ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಗಾಂಧಿ ಮೈದಾನ ಪೊಲೀಸ್ ಠಾಣೆ ವ್ಯಾಪ್ತಿಯ ‘ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದೆ. ಹೋಟೆಲ್ ಪಕ್ಕದಲ್ಲೇ ಇರುವ ‘ಟ್ವಿನ್ ಟವರ್’ ಸೊಸೈಟಿಯಲ್ಲಿ ಅವರು ವಾಸವಾಗಿದ್ದರು.

ಪಾಟ್ನಾ: ಬಿಹಾರದ ಪ್ರಮುಖ ಉದ್ಯಮಿ ಮತ್ತು ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಈ ಹತ್ಯೆ ಘಟನೆ ನಡೆದಿದೆ. ಪಾಟ್ನಾದ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಗಾಂಧಿ ಮೈದಾನ ಪೊಲೀಸ್ ಠಾಣೆ ವ್ಯಾಪ್ತಿಯ ‘ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದೆ. ಹೋಟೆಲ್ ಪಕ್ಕದಲ್ಲೇ ಇರುವ ‘ಟ್ವಿನ್ ಟವರ್’ ಸೊಸೈಟಿಯಲ್ಲಿ ಅವರು ವಾಸವಾಗಿದ್ದರು ಎನ್ನಲಾಗಿದೆ.
ಆರೋಪಿಗಳು ಗುಂಡು ಹಾರಿಸಿ ತಕ್ಷಣ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುಂಡಿನ ದಾಳಿಯಿಂದ ತೀವ್ರ ರಕ್ತಸ್ರಾವದಿಂದ ಖೇಮ್ಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳದಿಂದ ಒಂದು ಬುಲೆಟ್ ಮತ್ತು ಶೆಲ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜುಲೈ 4 ರಂದು ರಾತ್ರಿ 11 ಗಂಟೆ ಸುಮಾರಿಗೆ ಗಾಂಧಿ ಮೈದಾನದ ಬಳಿ ಉದ್ಯಮಿ ಗೋಪಾಲ್ ಖೇಮ್ಕಾ ಅವರಿಗೆ ಗುಂಡಿಕ್ಕಿ ಕೊಂದಿರುವ ಬಗ್ಗೆ ನಮಗೆ ಮಾಹಿತಿ ಬಂದಿತು. ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಸೆಂಟ್ರಲ್ ಸಿಟಿ ಎಸ್ಪಿ ದೀಕ್ಷಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



