ದೇಶ

ಲೂದಿಯಾನ: ದಲಿತ ವ್ಯಕ್ತಿಯ ಮೇಲೆ ಹಲ್ಲೆ, ಅರೆನಗ್ನ ಮೆರವಣಿಗೆ

ಮಂಗಳವಾರ ಲುಧಿಯಾನದ ಹೊರವಲಯದಲ್ಲಿರುವ ಸೀದಾ ಗ್ರಾಮದಲ್ಲಿ ನಡೆದ ಘಟನೆಯ ವೈರಲ್ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಲೂದಿಯಾನ: ದಲಿತ ವ್ಯಕ್ತಿಯ ಮೇಲೆ ಹಲ್ಲೆ, ಅರೆನಗ್ನ ಮೆರವಣಿಗೆ
ಅಪರಾಧ ಪ್ರಕರಣ — online desk
Published On :

ಲುದಿಯಾನ: ಲುದಿಯಾನದ ಹಳ್ಳಿಯೊಂದರಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಕಪ್ಪು ಬಣ್ಣ ಬಳಿದು ಅರೆನಗ್ನವಾಗಿ ಮೆರವಣಿಗೆ ಮಾಡಲಾಗಿರುವ ಘಟನೆ ವರದಿಯಾಗಿದೆ.

ಮಂಗಳವಾರ ಲುಧಿಯಾನದ ಹೊರವಲಯದಲ್ಲಿರುವ ಸೀದಾ ಗ್ರಾಮದಲ್ಲಿ ನಡೆದ ಘಟನೆಯ ವೈರಲ್ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಭಾಗಿಯಾಗಿರುವ ಇತರರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ದಂಪತಿಗಳು ಓಡಿಹೋಗಲು ಹರ್ಜೋತ್ ಸಿಂಗ್ ಸಹಾಯ ಮಾಡಿದ್ದಾರೆಂದು ಶಂಕಿಸಿದ ನಂತರ ಮಹಿಳೆಯ ಕುಟುಂಬದವರು ಆತನ ಮೇಲೆ ದಾಳಿ ನಡೆಸಿದ್ದಾರೆ.

ಹರ್ಜೋತ್ ಅವರ ಸ್ನೇಹಿತ ಮತ್ತು ಮಹಿಳೆ ಜೂನ್ 19 ರಂದು ವಿವಾಹವಾಗಿದ್ದರು. ಇದರ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಮುಂದುವರೆಯಿತು. ಮಂಗಳವಾರ, ಹರ್ಜೋತ್ ಸಲೂನ್‌ನಲ್ಲಿದ್ದಾಗ ಕೆಲವು ಪುರುಷರು ಒಳಗೆ ನುಗ್ಗಿ, ಅವರನ್ನು ಹೊರಗೆಳೆದು ಕ್ರೂರವಾಗಿ ಹಲ್ಲೆ ನಡೆಸಿದರು.

ಅವರು ಬಲವಂತವಾಗಿ ಅವನ ಗಡ್ಡ ಮತ್ತು ಮೀಸೆಯನ್ನು ಬೋಳಿಸಿದರು, ಮುಖಕ್ಕೆ ಕಪ್ಪು ಬಣ್ಣ ಬಳಿದು, ಬಟ್ಟೆಗಳನ್ನು ಹರಿದು, ಬೀದಿಗಳಲ್ಲಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿ ಜಾತಿ ನಿಂದನೆ ಮಾಡಿದ್ದಾರೆ. ಆ ವ್ಯಕ್ತಿಗಳು ಈ ಕೃತ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದರು ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಕೋರರನ್ನು ಗುರುಪ್ರೀತ್ ಅಲಿಯಾಸ್ ಗೋಪಾ, ಸಿಮ್ರನ್‌ಜೀತ್ ಸಿಂಗ್ ಅಲಿಯಾಸ್ ಸಿಮ್ಮಾ, ಸಂದೀಪ್ ಅಲಿಯಾಸ್ ಸ್ಯಾಮ್, ರಾಜ್‌ವೀರ್ ಮತ್ತು ರಮಣದೀಪ್ ಅಲಿಯಾಸ್ ಕಾಕಾ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.