ದೆಹಲಿ-NCRನಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲು; ಜನರಲ್ಲಿ ಆತಂಕ
ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ.
ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಹರಿಯಾಣದ ಜಜ್ಜರ್‌ನಿಂದ ಈಶಾನ್ಯಕ್ಕೆ 4 ಕಿ.ಮೀ ದೂರದಲ್ಲಿದ್ದು, 14 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.
ದೆಹಲಿ, ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಗಳಲ್ಲಿ ಭೂಕಂಪದ ಅನುಭವವಾಗಿದೆ. ಹರಿಯಾಣದ ರೋಹ್ಟಕ್‌ನಲ್ಲೂ ಪರಿಣಾಮ ಎದುರಿಸಲಾಗಿದ್ದು, ರಸ್ತೆಗಳಲ್ಲಿ ವಾಹನಗಳು ಅಲುಗಾಡಿದ ಅನುಭವವಾಗಿದೆ.
ಹರಿಯಾಣದ ಜಿಂದ್ ಮತ್ತು ಬಹದ್ದೂರ್‌ಗಢ ಹೊರತುಪಡಿಸಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪ್ರದೇಶಗಳು ಸಹ 10 ಸೆಕೆಂಡುಗಳ ಕಾಲ ಕಂಪನವನ್ನು ಅನುಭವಿಸಿದವು.
ಕಳೆದ ಆರು ತಿಂಗಳಲ್ಲಿ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಇದು ಮೂರನೇ ಭೂಕಂಪವಾಗಿದೆ. ಇದಕ್ಕೂ ಮೊದಲು, ಏಪ್ರಿಲ್ 19 ಮತ್ತು ಫೆಬ್ರವರಿ 17 ರಂದು ಸಹ ಭೂಕಂಪಗಳು ಸಂಭವಿಸಿದ್ದವು.
ಭೂಕಂಪನದ ಜೊತೆಗೆ ದೆಹಲಿ ಮತ್ತು ಎನ್'ಸಿಆರ್ ನಲ್ಲಿ ಬುಧವಾರ ಸಂಜೆಯಿಂದ ಮಳೆಯಾಗುತ್ತಿದೆ. ಈ ಮಳೆ ಈ ಮಾನ್ಸೂನ್‌ನಲ್ಲಿ ಅತ್ಯಂತ ಹೆಚ್ಚಿನ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಈ ರಣಮಳೆ ಸುರಿದಿದೆ. ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


