ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಜುಲೈ 16ಕ್ಕೆ ಫೈನಲ್; ಐದೂ ವರ್ಷ ನಾನೇ ಸಿಎಂ: ಸಿದ್ದರಾಮಯ್ಯ; Video
ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ 16ರಂದು ಸುರ್ಜೆವಾಲಾ ಅವರು ಮತ್ತೊಮ್ಮೆ ಬೆಂಗಳೂರಿಗೆ ಬರುತ್ತಾರೆ, ಅಂದು ನಾವು ಎಲ್ಲಾ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕವನ್ನು ಅಂತಿಮಗೊಳಿಸುತ್ತೇವೆ.

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಜೊತೆಯಲ್ಲಿ ನಾನು ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಾತುಕತೆ ನಡೆಸಿದ್ದೇವೆ. ನಿಗಮ-ಮಂಡಳಿಗಳಿಗೆ ನಮ್ಮ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಕುರಿತು ಚರ್ಚೆ ಮಾಡಿದ್ದೇವೆ, ಆದರೆ ನೇಮಕ ಪ್ರಕ್ರಿಯೆ ಪೂರ್ಣವಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ 16ರಂದು ಸುರ್ಜೆವಾಲಾ ಅವರು ಮತ್ತೊಮ್ಮೆ ಬೆಂಗಳೂರಿಗೆ ಬರುತ್ತಾರೆ, ಅಂದು ನಾವು ಎಲ್ಲಾ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕವನ್ನು ಅಂತಿಮಗೊಳಿಸುತ್ತೇವೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ. ದೆಹಲಿ ಭೇಟಿಯಲ್ಲಿಯೂ ಅಧಿಕಾರ ಹಂಚಿಕೆ ಕುರಿತು ಚರ್ಚೆಯಾಗಿಲ್ಲ.
ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ ಸ್ಪಷ್ಟನೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



