ಗಂಭೀರ ಸೇತುವೆ ಕುಸಿತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ; ರಾಜಕೀಯ ಕೆಸರೆರಚಾಟದಿಂದ ಅಂತ್ಯಕ್ರಿಯೆ ವಿಳಂಬ
ಮಹಿಸಾಗರ್ ನದಿಗೆ ಕಟ್ಟಲಾದ 40 ವರ್ಷ ಹಳೆಯ ಸೇತುವೆ ಕುಸಿದು, ಸಂಚರಿಸುತ್ತಿದ್ದ ಹಲವು ವಾಹನಗಳು ನದಿಗೆ ಬಿದ್ದಿದ್ದವು.

ಅಹಮದಾಬಾದ್: ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಗಂಭೀರಾ ಸೇತುವೆ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 20ಕ್ಕೆ ಏರಿಕೆಯಾಗಿದೆ.
ಮಹಿಸಾಗರ್ ನದಿಗೆ ಕಟ್ಟಲಾದ 40 ವರ್ಷ ಹಳೆಯ ಸೇತುವೆ ಕುಸಿದು, ಸಂಚರಿಸುತ್ತಿದ್ದ ಹಲವು ವಾಹನಗಳು ನದಿಗೆ ಬಿದ್ದಿದ್ದವು. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇಂದು 20ಕ್ಕೆ ಏರಿಕೆಯಾಗಿದ್ದು, ನದಿಗೆ ಬಿದ್ದವರಲ್ಲಿ ಇನ್ನೂ ಇಬ್ಬರು ನಾಪತ್ತೆಯಾಗಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ.
ಒಂದು ಕಡೆ ಮೃತರ ಕುಟುಂಬಗಳ ದುಃಖ ಹೆಚ್ಚುತ್ತಿದ್ದು, ಮತ್ತೊಂದು ಕಡೆ ರಾಜಕೀಯ ನಾಯಕರ ಕಟುವಾದ ಆರೋಪ, ಪ್ರತ್ಯಾರೋಪಗಳಿಂದ ಮೃತರ ಅಂತ್ಯಕ್ರಿಯೆ ವಿಳಂಬವಾಗುತ್ತಿದೆ.
ದುರಂತದಿಂದ ತೀವ್ರ ಟೀಕೆ ಎದುರಿಸುತ್ತಿರುವ ಗುಜರಾತ್ ಸರ್ಕಾರ, ಪ್ರಾಥಮಿಕ ತನಿಖೆಯ ನಂತರ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ.
ಲೋಕೋಪಯೋಗಿ ಖಾತೆ ಹೊಂದಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, 30 ದಿನಗಳಲ್ಲಿ ವಿವರವಾದ ವರದಿ ನೀಡುವಂತೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



