ಛತ್ತೀಸ್ ಗಢ: 1.18 ಕೋಟಿ ರೂ ಬಹುಮಾನ ಘೋಷಿಸಲಾದ ಮೂವರು ದಂಪತಿ ಸೇರಿದಂತೆ 23 ನಕ್ಸಲೀಯರ ಶರಣಾಗತಿ!
ನಾರಾಯಣಪುರ ಜಿಲ್ಲೆಯಲ್ಲಿ ನಿನ್ನೆಯಷ್ಟೇ 22 ನಕ್ಸಲೀಯರು ಶರಣಾಗಿದ್ದರು. ಇಂದು ಸುಕ್ಮಾ ಜಿಲ್ಲೆಯಲ್ಲಿ 1.18 ಕೋಟಿ ರೂ ಬಹುಮಾನ ಘೋಷಿಸಲಾಗಿದ್ದ ಮೂವರು ದಂಪತಿ ಸೇರಿದಂತೆ 23 ನಕ್ಸಲೀಯರು ಶರಣಾಗಿದ್ದಾರೆ.

ಸುಕ್ಮಾ: ಛತ್ತೀಸ್ ಗಢದಲ್ಲಿ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗುತ್ತಿರುವ ನಕ್ಸಲೀಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ನಾರಾಯಣಪುರ ಜಿಲ್ಲೆಯಲ್ಲಿ ನಿನ್ನೆಯಷ್ಟೇ 22 ನಕ್ಸಲೀಯರು ಶರಣಾಗಿದ್ದರು. ಇಂದು ಸುಕ್ಮಾ ಜಿಲ್ಲೆಯಲ್ಲಿ ರೂ. 1.18 ಕೋಟಿ ಬಹುಮಾನ ಘೋಷಿಸಲಾಗಿದ್ದ ಮೂವರು ದಂಪತಿ ಸೇರಿದಂತೆ 23 ನಕ್ಸಲೀಯರು ಶರಣಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದರಲ್ಲಿ ನಕ್ಸಲ್ ಗುಂಪಿನ 11 ಹಿರಿಯ ಸದಸ್ಯರು ಸೇರಿದ್ದಾರೆ. ಅವರಲ್ಲಿ ಬಹುತೇಕರು ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA)ಬೆಟಾಲಿಯನ್ ನಂ.1 ನಲ್ಲಿ ಸಕ್ರಿಯರಾಗಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.
ಪೊಳ್ಳು ನಕ್ಸಲ್ ಸಿದ್ದಾಂತ, ಅಮಾಯಕ ಆದಿವಾಸಿಗಳ ಮೇಲೆ ನಕ್ಸಲೀಯರು ನಡೆಸಿದ ದೌರ್ಜನ್ಯ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ನಿರಾಸೆಗೊಂಡು ಶರಣಾಗುತ್ತಿರುವುದಾಗಿ ಅವರು ಅಧಿಕಾರಿಗಳ ಮುಂದೆ ಹೇಳಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.
ಶರಣಾದವರಲ್ಲಿ 9 ಮಂದಿ ಮಹಿಳೆಯರು ಸೇರಿದ್ದಾರೆ. ಸುಕ್ಮಾ ಮತ್ತು ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ತೀವ್ರ ನಕ್ಸಲ್ ವಿರೋಧಿ ಕಾರ್ಯಾಚರಣೆಯಿಂದ ಬೆದರಿ ನಕ್ಸಲೀಯರ ಶರಣಾಗತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಚವಾಣ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



