ದೇಶ

Bihar: ಚುನಾವಣಾ ಆಯೋಗ ಮೋದಿ ಸರ್ಕಾರದ ಕೈಗೊಂಬೆ: ಕಾಂಗ್ರೆಸ್ ನಾಯಕ Kapil Sibal

ಚುನಾವಣಾ ಆಯೋಗವು (EC) ಪೌರತ್ವದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರವನ್ನು ಹೊಂದಿಲ್ಲ ಎಂದು ಹೇಳಿದರು.

Bihar: ಚುನಾವಣಾ ಆಯೋಗ ಮೋದಿ ಸರ್ಕಾರದ ಕೈಗೊಂಬೆ: ಕಾಂಗ್ರೆಸ್ ನಾಯಕ Kapil Sibal
ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್
Published On :

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರಮೋದಿಯವರ ಕೈಗೊಂಬೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಕಪಿಲ್‌ಸಿಬಲ್ (Kapil Sibal) ಆರೋಪಿಸಿದ್ದಾರೆ.

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಗ್ಗೆ ಟೀಕಿಸಿದ ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್, 'ಚುನಾವಣಾ ಆಯೋಗವು (EC) ಪೌರತ್ವದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರವನ್ನು ಹೊಂದಿಲ್ಲ' ಎಂದು ಹೇಳಿದರು.

ಈ ಕುರಿತು ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಕಪಿಲ್ ಸಿಬಲ್, 'ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯು ಬಹುಸಂಖ್ಯಾತರ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಉಳಿಯುವಂತೆ ನೋಡಿಕೊಳ್ಳುವ ಗುರಿಯನ್ನು ಹೊಂದಿರುವ ಅಸಂವಿಧಾನಿಕ ಕ್ರಮವಾಗಿದೆ' ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರತಿಯೊಬ್ಬ ಚುನಾವಣಾ ಆಯುಕ್ತರು ಸರ್ಕಾರದ ಜತೆಗಿನ ಹೊಂದಾಣಿಕೆಯಲ್ಲಿ ಹಿಂದಿನವರನ್ನು ಮೀರಿಸಿದ್ದಾರೆ. ಚುನಾವಣಾ ಆಯೋಗವು ಪೌರತ್ವದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರ ಹೊಂದಿಲ್ಲ ಎಂದು ಹೇಳಿದರು.

22 ವರ್ಷಗಳ ಬಳಿಕ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಅನರ್ಹರನ್ನು ಮತದಾರರ ಪಟ್ಟಿಯಿಂದ ಹೊರ ಹಾಕುತ್ತಿದೆ. ಕಾನೂನಿನ ಪ್ರಕಾರ ಮತ ಚಲಾಯಿಸಲು ಅರ್ಹರಿಗೆ ಅವಕಾಶ ನೀಡುತ್ತದೆ ಎಂದು ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಬಲವಾಗಿ ಸಮರ್ಥಿಸಿಕೊಂಡಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಆಧಾರ್, ಮತದಾರರ ಚೀಟಿ ಹಾಗೂ ರೇಷನ್‌ಕಾರ್ಡ್ ಪರಿಗಣಿಸುವಂತೆ ಸುಪ್ರೀಂಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.