ಭಾರೀ ಮಳೆಗೆ ಗುಡ್ಡ ಕುಸಿತ: ಓರ್ವ ಮಹಿಳೆ ಸಾವು, ಅಮರನಾಥ ಯಾತ್ರೆ ಸ್ಥಗಿತ; Video
ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಮಣ್ಣಿನ ಗುಡ್ಡ ಕುಸಿತ ಸಂಭವಿಸಿದ್ದು, ಇದರಿಂದಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಬಾಲ್ಟಾಲ್ ಮಾರ್ಗದಲ್ಲಿ ಮಣ್ಣಿನ ಕುಸಿತವಾಗಿದ್ದು, ಈ ವೇಳೆ ಭಯಭೀತರಾದ ಜನರು ಅಪಾಯದಿಂದ ತಪ್ಪಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.
ವೀಡಿಯೋದಲ್ಲಿ ಇಬ್ಬರು ಯಾತ್ರಿಗಳು ಸಿಲುಕಿರುವುದು ಸೆರೆಯಾಗಿದೆ. ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಪಾಯದಿಂದ ತಪ್ಪಿಸಿಕೊಳ್ಳಲು ಅನೇಕ ಜನರು ಮಾರ್ಗದಲ್ಲಿ ಅಳವಡಿಸಲಾದ ರೇಲಿಂಗ್‌ಗಳನ್ನು ಹಿಡಿದುಕೊಂಡಿರುವುದು ಕೂಡ ವಿಡಿಯೋದಲ್ಲಿ ಕಂಡು ಬಂದಿದೆ.
ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿರುವ ಯಾತ್ರಿಗಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಯಾತ್ರೆಯ ಮಾರ್ಗಗಳ ದುರಸ್ಥಿ ಕಾರ್ಯ ಮುಗಿಯುವವರೆಗೂ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವರ್ಷ ಇಲ್ಲಿಯವರೆಗೆ ಎರಡು ಲಕ್ಷಕ್ಕೂ ಹೆಚ್ಚು ಯಾತ್ರಿಕರು ಅಮರನಾಥನ ದರ್ಶನ ಪಡೆದಿದ್ದಾರೆ. ಜು.3 ರಂದು ಆರಂಭಗೊಂಡಿದ್ದ ಯಾತ್ರೆ ಆಗಸ್ಟ್ 9 ರಂದು ಕೊನೆಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



