ದೇಶ

ನಿಮಿಷಾ ಪ್ರಕರಣ 'ಸೂಕ್ಷ್ಮ ವಿಷಯ'; ಸ್ನೇಹಪರ ರಾಷ್ಟ್ರಗಳೊಂದಿಗೆ ಸಂಪರ್ಕದಲ್ಲಿದ್ದೇವೆ: ವಿದೇಶಾಂಗ ಸಚಿವಾಲಯ

"ಇದು ಸೂಕ್ಷ್ಮ ವಿಷಯವಾಗಿದ್ದು, ಈ ಪ್ರಕರಣದಲ್ಲಿ ಭಾರತ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ" ಎಂದು ಜೈಸ್ವಾಲ್ ತಮ್ಮ ವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಿಮಿಷಾ ಪ್ರಕರಣ 'ಸೂಕ್ಷ್ಮ ವಿಷಯ'; ಸ್ನೇಹಪರ ರಾಷ್ಟ್ರಗಳೊಂದಿಗೆ ಸಂಪರ್ಕದಲ್ಲಿದ್ದೇವೆ: ವಿದೇಶಾಂಗ ಸಚಿವಾಲಯ
ನಿಮಿಷ ಪ್ರಿಯಾ — online desk
Published On :

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ "ಪರಸ್ಪರ ಒಪ್ಪಿಗೆಯ ಪರಿಹಾರ" ಕಂಡುಕೊಳ್ಳುವ ಪ್ರಯತ್ನಗಳ ಭಾಗವಾಗಿ ಯೆಮೆನ್ ಅಧಿಕಾರಿಗಳು ಮತ್ತು ಕೆಲವು ಸ್ನೇಹಪರ ರಾಷ್ಟ್ರಗಳೊಂದಿಗೆ ಸಂಪರ್ಕದಲ್ಲಿದ್ದೇವೆಂದು ಗುರುವಾರ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾದ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು “ಕೇಂದ್ರ ಸರ್ಕಾರ ರಾಜತಾಂತ್ರಿಕ ಮಾರ್ಗಗಳನ್ನು ಸಕ್ರಿಯವಾಗಿ ಅನುಸರಿಸುತ್ತಿದೆ. ಮೃತನ ಕುಟುಂಬದೊಂದಿಗೆ ಒಂದು ಒಪ್ಪಂದಕ್ಕೆ ಬರಲು ಹೆಚ್ಚಿನ ಸಮಯವನ್ನು ಕೋರಲು ಸರ್ಕಾರ ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಹೇಳಿದ್ದಾರೆ.

"ಇದು ಸೂಕ್ಷ್ಮ ವಿಷಯವಾಗಿದ್ದು, ಈ ಪ್ರಕರಣದಲ್ಲಿ ಭಾರತ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ" ಎಂದು ಜೈಸ್ವಾಲ್ ತಮ್ಮ ವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

"ನಾವು ಕಾನೂನು ನೆರವು ನೀಡಿದ್ದೇವೆ ಮತ್ತು ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನು ನೇಮಿಸಿದ್ದೇವೆ. ನಾವು ನಿಯಮಿತ ಕಾನ್ಸುಲರ್ ಭೇಟಿಗಳನ್ನು ಸಹ ಏರ್ಪಡಿಸಿದ್ದೇವೆ ಮತ್ತು ಸಮಸ್ಯೆಯನ್ನು ಪರಿಹರಿಸಲು ಸ್ಥಳೀಯ ಅಧಿಕಾರಿಗಳು ಹಾಗೂ ಕುಟುಂಬ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಜುಲೈ 16 ರಂದು ನಿಗದಿಯಾಗಿದ್ದ ಪ್ರಿಯಾ ಅವರ ಗಲ್ಲು ಶಿಕ್ಷೆಯನ್ನು ಯೆಮೆನ್‌ನ ಸ್ಥಳೀಯ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಜೈಸ್ವಾಲ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.