ದೇಶ

ಛತ್ತೀಸ್ ಗಢ: ನಾರಾಯಣಪುರದಲ್ಲಿ ಎನ್ ಕೌಂಟರ್; ಆರು ನಕ್ಸಲೀಯರ ಹತ್ಯೆ!

ಸದ್ಯ ಶೋಧ ಕಾರ್ಯಾಚರಣೆ ಮುಂದುವರೆದಿದೆ. ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಸಿಬ್ಬಂದಿ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ವಿವರಗಳನ್ನು ಹಂಚಿಕೊಂಡಿಲ್ಲ.

ಛತ್ತೀಸ್ ಗಢ: ನಾರಾಯಣಪುರದಲ್ಲಿ ಎನ್ ಕೌಂಟರ್; ಆರು ನಕ್ಸಲೀಯರ ಹತ್ಯೆ!
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
Published On :

ರಾಯಪುರ: ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಅಬುಜ್‌ಮದ್‌ನ ಗುಡ್ಡಗಾಡು ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಆರು ಮಂದಿ ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಬಸ್ತಾರ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ನಕ್ಸಲೀಯರ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅಬುಜ್‌ಮದ್‌ನ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ಜಂಟಿ ತಂಡ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಶುಕ್ರವಾರ ಮಧ್ಯಾಹ್ನ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್ ಸ್ಥಳದಿಂದ ಇದುವರೆಗೆ ಆರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆದರೆ ಭದ್ರತಾ ಪಡೆಗಳಿಂದ ಗಾಯಗೊಂಡವರ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಸದ್ಯ ಶೋಧ ಕಾರ್ಯಾಚರಣೆ ಮುಂದುವರೆದಿದೆ. ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಸಿಬ್ಬಂದಿ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ವಿವರಗಳನ್ನು ಹಂಚಿಕೊಂಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.