ಹಿಮಾಚಲದಲ್ಲಿ ಭಾರಿ ಮಳೆ, ಭೂಕುಸಿತ: ನವ ದಂಪತಿ ಸಾವು, 471 ರಸ್ತೆಗಳು ಬಂದ್
ಚಂಬಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಸುರಿದ ಭಾರೀ ಮಳೆಯಿಂದಾಗಿ, ಸುತನ್ಹ್ ಗ್ರಾಮದ ಮನೆಯ ಮೇಲೆ ಬಂಡೆಯೊಂದು ಉರುಳಿ ಬಿದ್ದಿದೆ.

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿ, 471 ರಸ್ತೆಗಳು ಸ್ಥಗಿತಗೊಂಡಿದ್ದು, ಶಾಲಾ, ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ. ಭೂಕುಸಿತದಿಂದ ನವವಿವಾಹಿತ ದಂಪತಿ ಸಾವನ್ನಪ್ಪಿದ್ದು, ಸಾಮಾನ್ಯ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಶಿಮ್ಲಾ, ಕಾಂಗ್ರಾ, ಚಂಬಾ, ಸಿರ್ಮೌರ್ ಮತ್ತು ಮಂಡಿ ಸೇರಿದಂತೆ ರಾಜ್ಯದ 12 ಜಿಲ್ಲೆಗಳ ಪೈಕಿ ಐದು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ 'ರೆಡ್' ಅಲರ್ಟ್ ಘೋಷಿಸಿದೆ.
ಚಂಬಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಸುರಿದ ಭಾರೀ ಮಳೆಯಿಂದಾಗಿ, ಸುತನ್ಹ್ ಗ್ರಾಮದ ಮನೆಯ ಮೇಲೆ ಬಂಡೆಯೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ಇತ್ತೀಚೆಗೆ ವಿವಾಹವಾದ ಸನ್ನಿ ಮತ್ತು ಪಲ್ಲು ಎಂದು ದಂಪತಿ ಸಾವನ್ನಪ್ಪಿದ್ದಾರೆ.
ಭಾರೀ ಮಳೆಯಿಂದ ಹಲವು ಕಡೆ ಭೂಕುಸಿತ ಸಂಭವಿಸಿದ್ದು, ರಸ್ತೆಗಳು ಬಂದ್ ಆಗಿವೆ. ಹೀಗಾಗಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿರ್ಮೌರ್ ಜಿಲ್ಲೆಯ ಶಿಲಿಯಾ ಬಳಿ ರಾಷ್ಟ್ರೀಯ ಹೆದ್ದಾರಿ 707(ಹಟ್ಕೋಟಿಯಿಂದ ಪೋಂಟಾ ಸಾಹಿಬ್) ಬಂದ್ ಆಗಿದೆ. ಮಂಡಿ-ಕುಲ್ಲು ರಾಷ್ಟ್ರೀಯ ಹೆದ್ದಾರಿ 4-ಮೈಲಿ ಮತ್ತು 9-ಮೈಲಿ ಬಳಿ ನಿರ್ಬಂಧಿಸಲಾಗಿದೆ ಏಕೆಂದರೆ ರಸ್ತೆಯ ಮೇಲೆ ಶಿಲಾಖಂಡರಾಶಿಗಳು ಬೀಳುತ್ತಿವೆ. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಮತ್ತು ಪಠಾಣ್‌ಕೋಟ್-ಬಿಲಾಸ್‌ಪುರ ರಾಷ್ಟ್ರೀಯ ಹೆದ್ದಾರಿಯನ್ನೂ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


