ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆ ಆರಂಭಿಸಿದ ECI
ಉಪ ರಾಷ್ಟ್ರಪತಿ ಚುನಾವಣೆಗೆ ಪೂರ್ವಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿವೆ ಮತ್ತು ಚುನಾವಣೆಗೆ ಅಧಿಕೃತ ವೇಳಾಪಟ್ಟಿಯನ್ನು "ಚುನಾವಣಾ ಪೂರ್ವ ಚಟುವಟಿಕೆಗಳು ಪೂರ್ಣಗೊಂಡ ನಂತರ ಶೀಘ್ರದಲ್ಲೇ ಪ್ರಕಟಿಸಲಾಗುವುದು"

ನವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ(ECI) ಬುಧವಾರ ಪ್ರಾರಂಭಿಸಿದೆ.
ಗೃಹ ಸಚಿವಾಲಯ(MHA), ಜುಲೈ 22, 2025 ರಂದು ಹೊರಡಿಸಿದ ಗೆಜೆಟ್ ಅಧಿಸೂಚನೆಯ ಮೂಲಕ ಧನಕರ್ ಅವರ ರಾಜೀನಾಮೆ ಅಂಗೀಕರಿಸಿರುವುದನ್ನು ಅಧಿಕೃತವಾಗಿ ತಿಳಿಸಿದ್ದು, ಈ ಮೂಲಕ ಸಾಂವಿಧಾನಿಕ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಚುನಾವಣಾ ಪ್ರಕ್ರಿಯೆಗೆ ದಾರಿ ಮಾಡಿಕೊಟ್ಟಿದೆ ಎಂದು ECI ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
"ಸಂವಿಧಾನದ 324ನೇ ವಿಧಿಯ ಪ್ರಕಾರ, ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಸಲು ECI ಗೆ ಅಧಿಕಾರವಿದೆ. ಈ ಚುನಾವಣೆಗಳು 1952 ರ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ಕಾಯ್ದೆ ಮತ್ತು 1974 ರ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ನಿಯಮಗಳಿಂದ ನಿಯಂತ್ರಿಸಲ್ಪಡುತ್ತವೆ" ಎಂದು ECI ತಿಳಿಸಿದೆ.
ಉಪ ರಾಷ್ಟ್ರಪತಿ ಚುನಾವಣೆಗೆ ಪೂರ್ವಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿವೆ ಮತ್ತು ಚುನಾವಣೆಗೆ ಅಧಿಕೃತ ವೇಳಾಪಟ್ಟಿಯನ್ನು "ಚುನಾವಣಾ ಪೂರ್ವ ಚಟುವಟಿಕೆಗಳು ಪೂರ್ಣಗೊಂಡ ನಂತರ ಶೀಘ್ರದಲ್ಲೇ ಪ್ರಕಟಿಸಲಾಗುವುದು" ಎಂದು ಚುನಾವಣಾ ಆಯೋಗ ತಿಳಿಸಿದೆ.
ಉಪ ರಾಷ್ಟ್ರಪತಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಯ್ಕೆ ಮಾಡುತ್ತಾರೆ. ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
ಬಿಜೆಪಿ ನೇತೃತ್ವದ ಎನ್ಡಿಎ ಲೋಕಸಭೆಯಲ್ಲಿ 293 ಸದಸ್ಯರ ಬೆಂಬಲವನ್ನು ಹೊಂದಿದೆ( 542 ಸದಸ್ಯರು) ರಾಜ್ಯಸಭೆಯಲ್ಲಿ 129 ಸದಸ್ಯರ ಬೆಂಬಲವನ್ನು ಹೊಂದಿದೆ. ಇನ್ನು ನಾಮನಿರ್ದೇಶಿತ ಸದಸ್ಯರುಗಳನ್ನು ಸೇರಿಸಿದರೆ, ಆಡಳಿತ ಒಕ್ಕೂಟವು 786 ಸದಸ್ಯರಲ್ಲಿ 422 ಸದಸ್ಯರ ಬೆಂಬಲವನ್ನು ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




