ಬಿಹಾರ SIR ಕುರಿತು ಚರ್ಚೆಗೆ ಪ್ರತಿಪಕ್ಷಗಳ ಪಟ್ಟು: 4ನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ
ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ, ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತು ಉಭಯ ಸದನಗಳಲ್ಲಿ ಚರ್ಚಿಸುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಪ್ರತಿಪಕ್ಷಗಳು ಪ್ರತಿಭಟಿಸುತ್ತಿವೆ.

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸುತ್ತಲೇ ಇದ್ದುದರಿಂದ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ಗುರುವಾರ ಸತತ ನಾಲ್ಕನೇ ದಿನವೂ ಮುಂದೂಡಲಾಯಿತು.
ಎರಡೂ ಸದನಗಳನ್ನು ಇಂದು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಆದರೆ ಪ್ರತಿಪಕ್ಷಗಳ ಪ್ರತಿಭಟನೆ ಮತ್ತು ಘೋಷಣೆ ಕೂಗುವುದನ್ನು ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ನಾಳೆಗೆ ಮುಂದೂಡಲಾಗಿದೆ.
ಇಂದು ದಿನದ ಕಲಾಪ ಆರಂಭಕ್ಕೂ ಮುನ್ನ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ಸದಸ್ಯರು ಸಂಸತ್ತಿನ ಮಕರ ದ್ವಾರದ ಹೊರಗೆ ಪ್ರತಿಭಟನೆ ನಡೆಸಿದರು, ECI ಯ SIR ಅನ್ನು ಟೀಕಿಸಿದರು ಮತ್ತು ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.
ಅಧಿವೇಶನದ ಮೊದಲ ಮೂರು ದಿನಗಳು ಇದೇ ರೀತಿಯ ಪ್ರತಿಭಟನೆಗಳಿಂದಾಗಿ ಯಾವುದೇ ಚರ್ಚೆ ನಡೆಯದೇ ಕಲಾಪ ಮುಂದೂಡಿಕೆಯಾಗಿದೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ, ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತು ಉಭಯ ಸದನಗಳಲ್ಲಿ ಚರ್ಚಿಸುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಪ್ರತಿಪಕ್ಷಗಳು ಪ್ರತಿಭಟಿಸುತ್ತಿವೆ. ಪ್ರತಿಪಕ್ಷಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿಲ್ಲ. ಇದರಿಂದ ಕಲಾಪಕ್ಕೆ ಅಡ್ಡಿಯಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



