Hyderabad: ಬ್ಯಾಡ್ಮಿಂಟನ್ ಆಡುತ್ತಲೇ ಆಟಗಾರ Heart Attack ನಿಂದ ಸಾವು! Video Viral
ಹೈದರಾಬಾದ್ ನ ನಾಗೋಲ್ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದ ಗುಂಡ್ಲಾ ರಾಕೇಶ್ (25) ಎಂಬ ಯುವಕ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದು ಪ್ರಜ್ಞಾಹೀನರಾದರು.

ಹೈದರಾಬಾದ್: ಬ್ಯಾಡ್ಮಿಂಟನ್ ಆಡುತ್ತಲೇ ಆಟಗಾರನೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಧಾರುಣ ಘಟನೆ ಹೈದರಾಬಾದ್ ನಲ್ಲಿ ವರದಿಯಾಗಿದೆ.
ಹೈದರಾಬಾದ್ ನ ನಾಗೋಲ್ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದ ಗುಂಡ್ಲಾ ರಾಕೇಶ್ (25) ಎಂಬ ಯುವಕ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದು ಪ್ರಜ್ಞಾಹೀನರಾದರು. ಕೂಡಲೇ ಅವರನ್ನು ಗಮನಿಸಿದ ಆಟಗಾರರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದುರು. ಆದರೆ ಯುವಕ ರಾಕೇಶ್ ಈಗಾಗಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಮೃತ ರಾಕೇಶ್ ಅವರನ್ನು ಖಮ್ಮಂ ಜಿಲ್ಲೆಯ ತಲ್ಲಡ ನಿವಾಸಿ ಎಂದು ಗುರುತಿಸಲಾಗಿದೆ. ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ವ್ಯಕ್ತಿ ಖಮ್ಮಂ ಜಿಲ್ಲೆಯ ತಲ್ಲಡದ ಮಾಜಿ ಉಪ ಸರಪಂಚ್ ಗುಂಡ್ಲಾ ವೆಂಕಟೇಶ್ವರಲು ಅವರ ಪುತ್ರ ಎಂದು ಹೇಳಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಿಡಿಯೋ ವೈರಲ್
ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಭಾನುವಾರ ರಾತ್ರಿ 8:00 ಗಂಟೆ ಸುಮಾರಿಗೆ ನಾಗೋಲ್ ಕ್ರೀಡಾಂಗಣದಲ್ಲಿ ನಡೆದ ಡಬಲ್ಸ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ರಾಕೇಶ್ ಭಾಗವಹಿಸಿದ್ದರು. ಈ ವೇಳೆ ರಾಕೇಶ್ ಶಟಲ್ ಕಾಕ್ ತೆಗೆದುಕೊಳ್ಳಲು ಬಾಗಿದ ಕೆಲವೇ ಕ್ಷಣಗಳಲ್ಲಿ, ಅವರು ಇದ್ದಕ್ಕಿದ್ದಂತೆ ಕೋರ್ಟ್‌ನಲ್ಲಿ ಕುಸಿದು ಬಿದ್ದಿದ್ದು ಕ್ಯಾಮೆರಾದಲ್ಲಿ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


