ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಣೆಗೆ ಲೋಕಸಭೆಯಲ್ಲಿ ನಿರ್ಣಯ ಮಂಡನೆ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಿಸುವ ಶಾಸನಬದ್ಧ ನಿರ್ಣಯವನ್ನು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಇಂದು ಮಂಡಿಸಿದ್ದಾರೆ.

ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಆಗಸ್ಟ್ 13ರ ನಂತರ ಇನ್ನೂ ಆರು ತಿಂಗಳು ವಿಸ್ತರಿಸಲು ಅನುಮೋದನೆ ಕೋರಿ ಕೇಂದ್ರ ಸರ್ಕಾರ ಬುಧವಾರ ಲೋಕಸಭೆಯಲ್ಲಿ ನಿರ್ಣಯ ಮಂಡಿಸಿದೆ.
ಲೋಕಸಭೆಯಲ್ಲಿ ಚರ್ಚೆಗಾಗಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಿಸುವ ಶಾಸನಬದ್ಧ ನಿರ್ಣಯವನ್ನು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಇಂದು ಮಂಡಿಸಿದ್ದಾರೆ.
ಮಣಿಪುರದಲ್ಲಿ ಕಳೆದ ಫೆಬ್ರವರಿ 13 ರಂದು ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದ್ದು, ಏಪ್ರಿಲ್ 2 ರಂದು ಸದನವು ಅದನ್ನು ಅಂಗೀಕರಿಸಿದೆ ಎಂದು ಸ್ಪೀಕರ್ ಓಂ ಬಿರ್ಲಾ ತಿಳಿಸಿದರು.
ಸಂಸತ್ತಿನಿಂದ ರಾಷ್ಟ್ರಪತಿ ಆಳ್ವಿಕೆಯ ಅನುಮೋದನೆಯು ಆರು ತಿಂಗಳವರೆಗೆ ಮಾನ್ಯವಾಗಿರುತ್ತದೆ.
"ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ ಆರು ತಿಂಗಳು ವಿಸ್ತರಿಸಬೇಕಾದರೆ, ಶಾಸನಬದ್ಧ ನಿರ್ಣಯವನ್ನು ಸಂಸತ್ತಿನ ಎರಡೂ ಸದನಗಳು ಅನುಮೋದಿಸಬೇಕಾಗುತ್ತದೆ" ಎಂದು ಬಿರ್ಲಾ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



