ನವದೆಹಲಿ: ಏರ್ ಇಂಡಿಯಾ ಬೋಯಿಂಗ್ ವಿಮಾನದಲ್ಲಿ ತಾಂತ್ರಿಕ ದೋಷ; ಟೇಕಾಫ್ ಸ್ಥಗಿತ
ಇಂದು ದೆಹಲಿಯಿಂದ ಲಂಡನ್ಗೆ ಹಾರಾಟ ಆರಂಭಿಸಿದ AI2017 ವಿಮಾನದಲ್ಲಿ ಕೂಡಲೇ ತಾಂತ್ರಿಕ ಸಮಸ್ಯೆ ಕಂಡುಬಂದಿದೆ. ತದನಂತರ ಅದು ಬೇ (bay) ಗೆ ಮರಳಿದೆ.

ನವದೆಹಲಿ: ಲಂಡನ್ಗೆ ತೆರಳಬೇಕಿದ್ದ ಏರ್ ಇಂಡಿಯಾದ ಬೋಯಿಂಗ್ 787-9 ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಸ್ಥಗಿತಗೊಳಿಸಿದ ಘಟನೆ ಗುರುವಾರ ನಡೆದಿದೆ.
ಇಂದು ದೆಹಲಿಯಿಂದ ಲಂಡನ್ಗೆ ಹಾರಾಟ ಆರಂಭಿಸಿದ AI2017 ವಿಮಾನದಲ್ಲಿ ಕೂಡಲೇ ತಾಂತ್ರಿಕ ಸಮಸ್ಯೆ ಕಂಡುಬಂದಿದೆ. ತದನಂತರ ಅದು ಬೇ (bay) ಗೆ ಮರಳಿದೆ.
ಕಾಕ್ಪಿಟ್ ಸಿಬ್ಬಂದಿ ಮಾರ್ಗಸೂಚಿಗಳನ್ನು (Sop) ಅನುಸರಿಸಿ ಟೇಕಾಫ್ ಸ್ಥಗಿತಕ್ಕೆ ನಿರ್ಧರಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆಗಾಗಿ ಲ್ಯಾಂಡಿಂಗ್ ಮಾಡಿದರು ಎಂದು ಏರ್ಲೈನ್ ವಕ್ತಾರರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಮಾನದ ಬದಲಿಗೆ ಪರ್ಯಾಯ ವಿಮಾನವನ್ನು ನಿಯೋಜಿಸಲಾಗಿದೆ ಎನ್ನಲಾಗಿದೆ. ಈ ಅನಿರೀಕ್ಷಿತ ವಿಳಂಬದಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ಏರ್ ಲೈನ್ಸ್ ವಿಷಾಧ ವ್ಯಕ್ತಪಡಿಸಿದೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



