ದೇಶ

RCB ಅಭಿಮಾನಿಗಳ ಕಾಲ್ತುಳಿತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಜೀವಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

RCB ಅಭಿಮಾನಿಗಳ ಕಾಲ್ತುಳಿತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಗೇಟ್ ಬಳಿ ಜಮಾಯಿಸಿರುವ RCB ಅಭಿಮಾನಿಗಳು
Published On :

ನವದೆಹಲಿ: IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಇದು 'ಹೃದಯವಿದ್ರಾವಕ ಘಟನೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

'ಬೆಂಗಳೂರಿನಲ್ಲಿ ನಡೆದ ದುರಂತ ಅತ್ಯಂತ ಹೃದಯವಿದ್ರಾವಕವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಜೀವಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.