ದೇಶ

ವ್ಯಾನ್ ಮೇಲೆ ಮಗುಚಿಬಿದ್ದ ಟ್ರಕ್: ಮಧ್ಯ ಪ್ರದೇಶದ ಜಬುವಾ ಜಿಲ್ಲೆಯಲ್ಲಿ 9 ಮಂದಿ ಸಾವು; Video

ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ನಸುಕಿನ ಜಾವ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ವ್ಯಾನ್ ಮೇಲೆ ಮಗುಚಿಬಿದ್ದ ಟ್ರಕ್: ಮಧ್ಯ ಪ್ರದೇಶದ ಜಬುವಾ ಜಿಲ್ಲೆಯಲ್ಲಿ 9 ಮಂದಿ ಸಾವು; Video
ಝಬುವಾದಲ್ಲಿ, ನಿಯಂತ್ರಣ ತಪ್ಪಿ ಟ್ರೇಲರ್ ವ್ಯಾನ್ ಮೇಲೆ ಉರುಳಿಬಿದ್ದ ಪರಿಣಾಮ ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದ 11 ಜನರಲ್ಲಿ 9 ಜನರು ಮೃತಪಟ್ಟರು.
Published On :

ಜಬುವಾ: ಮಧ್ಯಪ್ರದೇಶದ ಜಬುವಾ ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ಸಿಮೆಂಟ್ ತುಂಬಿದ ಟ್ರೇಲರ್ ಟ್ರಕ್ ವ್ಯಾನ್ ಮೇಲೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ನಸುಕಿನ ಜಾವ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಮೇಘನಗರ ತಹಸಿಲ್ ಪ್ರದೇಶದ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ತಾತ್ಕಾಲಿಕ ರಸ್ತೆಯ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ (ಆರ್‌ಒಬಿ) ದಾಟುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ವ್ಯಾನ್ ಮೇಲೆ ಉರುಳಿತು ಎಂದು ಜಬುವಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮವಿಲೋಚನ್ ಶುಕ್ಲಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.