ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲೇ ತುರ್ತು ಲ್ಯಾಂಡಿಂಗ್; ಕಾರು ಜಖಂ! Video
ಪೈಲಟ್ ಸೇರಿದಂತೆ ಖಾಸಗಿ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ ಆರು ಜನ ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ.

ನವದೆಹಲಿ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಶನಿವಾರ ಉತ್ತರಾಖಂಡದ ಸಿರ್ಸಿ ಹೆಲಿಪ್ಯಾಡ್‌ನಿಂದ ಟೇಕ್ ಆಫ್ ಆಗುವಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ನಂತರ ರುದ್ರಪ್ರಯಾಗ ಜಿಲ್ಲೆಯ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದ ಒಂದು ಭಾಗವು ಕೆಳಗೆ ರಸ್ತೆಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿಗೆ ತಗುಲಿದ್ದು, ಕಾರು ಜಖಂಗೊಂಡಿದೆ. ಪೈಲಟ್ ಸೇರಿದಂತೆ ಖಾಸಗಿ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ ಆರು ಜನ ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಚಾರ್ ಧಾಮ್ ಮಾರ್ಗದಲ್ಲಿ ಹೆಲಿಕಾಪ್ಟರ್ ಅಪಘಾತಗಳು ಹೆಚ್ಚುತ್ತಿದ್ದು, ಕಳೆದ ತಿಂಗಳು ಮೇ 8 ರಂದು ಉತ್ತರಕಾಶಿಯಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಪೈಲಟ್ ಸೇರಿದಂತೆ 6 ಯಾತ್ರಿಕರು ಸಾವನ್ನಪ್ಪಿದ್ದರು. ಏರೋಟ್ರಾನ್ಸ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್‌ನ ಹೆಲಿಕಾಪ್ಟರ್ ಉತ್ತರಕಾಶಿಯ ಗಂಗಾನಿಯಲ್ಲಿ ಅಪಘಾತಕ್ಕೀಡಾಗಿತ್ತು.
ಕ್ರಿಸ್ಟಲ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಸೇರಿದ ಈ ಹೆಲಿಕಾಪ್ಟರ್(AW 119) ರುದ್ರಪ್ರಯಾಗ ಜಿಲ್ಲೆಯ ಬಡಾಸು ಪ್ರದೇಶದ ಹೆಲಿಪ್ಯಾಡ್‌ನಿಂದ ಮಧ್ಯಾಹ್ನ 12.52 ಕ್ಕೆ ಹೊರಟಿತ್ತು. ಆದರೆ ಟೇಕ್ ಆಫ್ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಹೆದ್ದಾರಿಯಲ್ಲಿಯೇ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ಹೀಗಾಗಿ ರಸ್ತೆಯಲ್ಲಿ ನಿಂತಿದ್ದ ಕಾರಿಗೆ ಹೆಲಿಕಾಪ್ಟರ್ ನ ಬಾಲ ತಗುಲಿದೆ ಎಂದು ಮೂಲವೊಂದು ತಿಳಿಸಿದೆ. ಕಾರು ಕೂಡ ನಜ್ಜುಗುಜ್ಜಾಗಿದೆ" ಎಂದು ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರದ ಅಧಿಕೃತ ಮಾಹಿತಿಯ ಪ್ರಕಾರ, "ವಿಮಾನದಲ್ಲಿದ್ದ ಎಲ್ಲಾ ಐದು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ."
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


