ರಾಜಸ್ಥಾನ: ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ನರ್ಸಿಂಗ್ ಸಿಬ್ಬಂದಿಯಿಂದ ಅತ್ಯಾಚಾರ!
ಪತಿಯ ದೂರಿನ ಆಧಾರದ ಮೇಲೆ ಎಂಐಎ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು MIA ಪ್ರದೇಶದ SHO ಅಜಿತ್ ಬದ್ಸಾರಾ ತಿಳಿಸಿದ್ದಾರೆ.

ರಾಜಸ್ಥಾನ: ಆಸ್ಪತ್ರೆಯೊಂದರಲ್ಲಿ ಮಹಿಳಾ ರೋಗಿ ಮೇಲೆ ನರ್ಸಿಂಗ್ ಸಿಬ್ಬಂದಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಳ್ವಾರ್ ಜಿಲ್ಲೆಯಲ್ಲಿ ನಡೆದಿದೆ.
MIA ಪ್ರದೇಶದಲ್ಲಿರುವ ESIC ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ನರ್ಸಿಂಗ್ ಸಿಬ್ಬಂದಿಯೊಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ಮಹಿಳಾ ರೋಗಿಯೊಬ್ಬರು ಆರೋಪಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಘಟನೆಯ ನಂತರ, ಆಕೆಯ ಪತಿ ದೂರು ದಾಖಲಿಸಿದ್ದಾರೆ. ಟ್ಯೂಬ್ ಆಪರೇಷನ್ಗಾಗಿ ಜೂನ್ 2 ರಂದು ತನ್ನ ಹೆಂಡತಿಯನ್ನುಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.
ಜೂನ್ 4 ರಂದು ಆಪರೇಷನ್ ನಂತರ ಆಕೆಯನ್ನು ICU ಗೆ ಸ್ಥಳಾಂತರಿಸಲಾಯಿತು. ಸಿಬ್ಬಂದಿ ಆಕೆಯನ್ನು ಆಪರೇಷನ್ ಕೊಠಡಿಯಿಂದ ಹೊರಗೆ ಕರೆದೊಯ್ದಿದ್ದಾರೆ. ತದನಂತರ ನರ್ಸಿಂಗ್ ಸಿಬ್ಬಂದಿಯೊಬ್ಬರು ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾರೆ. ಮರುದಿನ ಪ್ರಜ್ಞೆ ಬಂದ ಮೇಲೆ ಸಂತ್ರಸ್ತೆ ಘಟನೆ ಬಗ್ಗೆ ತನ್ನ ಪತಿಗೆ ತಿಳಿಸಿದ್ದಾಳೆ.
ಪತಿಯ ದೂರಿನ ಆಧಾರದ ಮೇಲೆ ಎಂಐಎ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು MIA ಪ್ರದೇಶದ SHO ಅಜಿತ್ ಬದ್ಸಾರಾ ತಿಳಿಸಿದ್ದಾರೆ.
ಪ್ರಕರಣ ದಾಖಲಾದ ನಂತರ ಆಡಳಿತಾತ್ಮಕ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಇಎಸ್ಐಸಿ ವೈದ್ಯಕೀಯ ಕಾಲೇಜಿನ ಡೀನ್ ಅಸೀಮ್ ದಾಸ್ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



