ಮದುವೆ ಮನೆಯಿಂದ ಅಪಹರಿಸಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ
ವಿಶಾಖಪಟ್ಟಣಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಜಾಂ: ಈ ವಾರದ ಆರಂಭದಲ್ಲಿ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ 14 ಮತ್ತು 15 ವರ್ಷದ ಇಬ್ಬರು ಬಾಲಕಿಯರನ್ನು ಮದುವೆ ಮನೆಯಿಂದ ಅಪಹರಿಸಿ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶಾಖಪಟ್ಟಣಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ರಹ್ಮಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶ್ರವಣ್ ವಿವೇಕ್ ಅವರ ಪ್ರಕಾರ, ಈ ಘಟನೆ ಜೂನ್ 3 ರಂದು ನಡೆದಿದೆ.
ಅಪ್ರಾಪ್ತರು ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದಾಗ ಆರೋಪಿಗಳು ಅವರನ್ನು ಅಪಹರಿಸಿದ್ದಾರೆ. ಬಳಿಕ ಅವರ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ್ದಾರೆ. ನಂತರ ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಕುಟುಂಬ ಆರೋಪಿಸಿದ್ದಾರೆ ಎಂದು ಎಸ್ಪಿ ಹೇಳಿದರು.
ಪ್ರಾಥಮಿಕ ತನಿಖೆಯಲ್ಲಿ, ಬಾಲಕಿಯರನ್ನು ಇಬ್ಬರು ಪುರುಷರು ಕರೆದೊಯ್ದಿದ್ದಾರೆ. ಅವರಲ್ಲಿ ಒಬ್ಬ ಬಾಲಕಿಗೆ ಆರೋಪಿಗಳ ಪರಿಚಯವಿತ್ತು. ನಂತರ ಈ ಇಬ್ಬರು ಪುರುಷರೊಂದಿಗೆ ಇನ್ನಿಬ್ಬರು ಸೇರಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಜೂನ್ 4 ರಂದು ದೂರು ದಾಖಲಿಸಲಾಗಿದ್ದು, ಜೂನ್ 6 ರಂದು ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಯಿತು.
'ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಗೋಲಂತ್ರ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಸಂತ್ರಸ್ತರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಸಮಾಲೋಚನೆಗಾಗಿ ಹಾಜರುಪಡಿಸಲಾಯಿತು' ಎಂದು ವಿವೇಕ್ ಹೇಳಿದರು.
ಆರೋಪಿಗಳು ವಿಶಾಖಪಟ್ಟಣಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



