ಕೇರಳ: ಸಮುದ್ರದ ಮಧ್ಯೆ ಅಗ್ನಿ ಅವಘಡ; ಉರಿಯುತ್ತಿದ್ದ ಹಡಗಿನಿಂದ 18 ಸಿಬ್ಬಂದಿ ರಕ್ಷಣೆ!
ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಂಟೈನರ್ ಹಡಗಿನಿಂದ 18 ಸಿಬ್ಬಂದಿಯನ್ನು ಭಾರತೀಯ ನೌಕಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.

ಕೇರಳ: ಕೇರಳದ ಕರಾವಳಿಯಲ್ಲಿ ಸೋಮವಾರ ಬೆಳಗ್ಗೆ ಸಿಂಗಾಪುರ ಧ್ವಜ ಹೊಂದಿರುವ ಕಂಟೈನರ್ ಹಡಗು ಎಂವಿ ವಾನ್ ಹೈ 503ರಲ್ಲಿ (MVWanHai 503) ಸ್ಫೋಟವೊಂದು ಸಂಭವಿಸಿರುವುದಾಗಿ ರಕ್ಷಣಾ ಪಡೆ PRO ತಿಳಿಸಿದೆ.
ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಂಟೈನರ್ ಹಡಗಿನಿಂದ 18 ಸಿಬ್ಬಂದಿಯನ್ನು ಭಾರತೀಯ ನೌಕಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.
ಬೆಳಗ್ಗೆ 10-30 ರ ಸುಮಾರಿನಲ್ಲಿ ಸ್ಫೋಟದ ಮೊದಲ ವರದಿಯನ್ನು ಮುಂಬೈನ ಕಡಲ ಕಾರ್ಯಾಚರಣೆ ಕೇಂದ್ರ ಕೊಚ್ಚಿಯಲ್ಲಿರುವ ಕಡಲ ಕಾರ್ಯಾಚರಣೆ ಕೇಂದ್ರಕ್ಕೆ ತಿಳಿಸಿದೆ. 270 ಮೀಟರ್ ಉದ್ದದ ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟು ಮುಂಬೈಗೆ ತೆರಳುತ್ತಿತ್ತು, ಜೂನ್ 10 ರಂದು ಆಗಮಿಸುವ ನಿರೀಕ್ಷೆಯಿತ್ತು.
ಸಮುದ್ರ ಮಧ್ಯದಲ್ಲಿಎಂವಿ ವಾನ್ ಹೈ 503 ಹಡಗಿನಲ್ಲಿ ಸ್ಫೋಟ ಸಂಭವಿಸಿರುವ ಬಗ್ಗೆ ಜೂನ್ 9 ರಂದು ಬೆಳಗ್ಗೆ 10-30 ರ ಸುಮಾರಿನಲ್ಲಿ ಮುಂಬೈ ಕಡಲ ಕಾರ್ಯಾಚಾರಣೆ ಕೇಂದ್ರದಿಂದ ಮಾಹಿತಿ ಪಡೆಯಲಾಯಿತು. ಸಿಂಗಾಪುರ ಧ್ವಜ ಹೊಂದಿರುವ ಕಂಟೈನರ್ ಹಡಗು ಆಗಿದ್ದು, ಕೊಲೊಂಬೊದಿಂದ ಮುಂಬೈಗೆ ತೆರಳುತಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ನೌಕ ಪಡೆ ಕೊಚ್ಚಿಯಲ್ಲಿ ನಿಲ್ಲಿಸಲು ನಿರ್ಧರಿಸಿದ್ದ ಐಎನ್‌ಎಸ್ ಸೂರತ್ ನ್ನು ನೆರವಿಗೆ ಕಳುಹಿಸಿದ್ದಾರೆ ಎಂದು ರಕ್ಷಣಾ ಪಡೆ PRO ಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



