ಛತ್ತೀಸ್ ಗಢ: ನಕ್ಸಲೀಯರು ಇರಿಸಿದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮ
ನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲೀಯರು ಇರಿಸಿದ ಸುಧಾರಿತ ಸ್ಫೋಟಕ ಸಾಧನ (IED)ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಇತರ ಕೆಲವು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
2013ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿಯಾಗಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಕೊಂಟಾ ವಿಭಾಗ) ಆಕಾಶ್ ರಾವ್ ಗಿರೆಪುಂಜೆ ಅವರು ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ ಎಂದು ಗೃಹ ಖಾತೆಯನ್ನು ಹೊಂದಿರುವ ರಾಜ್ಯದ ಉಪ ಮುಖ್ಯಮಂತ್ರಿ ವಿಜಯ್ ಶರ್ಮಾ ಅವರು ತಿಳಿಸಿದ್ದಾರೆ.
ನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.
ASP ಮತ್ತು ಇತರ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದಾಗ ಕೊಂಟಾ-ಎರ್ರಾಬೋರ್ ರಸ್ತೆಯ ದೊಂಡ್ರಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚಿಗೆ ಬಿಜಾಪುರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಹತ್ಯೆಯಾಗಿದ್ದರು. ಇದರ ಬೆನ್ನಲ್ಲೇ ಮತ್ತೆ ಚುರುಕು ಆಗಿರುವ ನಕ್ಸಲೀಯರು ಸೋಮವಾರ ಐಇಡಿ ಸ್ಫೋಟಿಸುವ ಮೂಲಕ ಹಿರಿಯ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



