ತಿರುಪತಿ ಲಡ್ಡು ಕೇಸ್: TTD ಮಾಜಿ ಅಧ್ಯಕ್ಷ, ಕಾರ್ಯನಿರ್ವಾಹಕ ಅಧಿಕಾರಿಗೆ SIT ನೋಟಿಸ್!
ಎಸ್‌ಐಟಿ ಅಧಿಕಾರಿಗಳು ಟಿಟಿಡಿ ಮಾಜಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ, ಧರ್ಮ ರೆಡ್ಡಿ, ಮತ್ತಿತರ ಹಿಂದಿನ ಅಧ್ಯಕ್ಷರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಮಾಜಿ ಟಿಟಿಡಿ ಇಒ ಅನಿಲ್ ಕುಮಾರ್ ಸಿಂಘಾಲ್ ಅವರಿಗೆ ನೋಟಿಸ್ ನೀಡಲಾಗುತ್ತಿದೆ.

ತಿರುಮಲ: ಆಂಧ್ರ ಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಲಡ್ಡು ತುಪ್ಪ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಸೇವೆ ಸಲ್ಲಿಸಿದ ಟಿಟಿಡಿ ಮಾಜಿ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೋಟಿಸ್ ನೀಡಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಎಸ್‌ಐಟಿ ಅಧಿಕಾರಿಗಳು ಟಿಟಿಡಿ ಮಾಜಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ, ಧರ್ಮ ರೆಡ್ಡಿ, ಮತ್ತಿತರ ಹಿಂದಿನ ಅಧ್ಯಕ್ಷರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಮಾಜಿ ಟಿಟಿಡಿ ಇಒ ಅನಿಲ್ ಕುಮಾರ್ ಸಿಂಘಾಲ್ ಅವರಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ತಿರುಪತಿಯ ಪವಿತ್ರ ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪದ ಪೂರೈಕೆ ಆರೋಪದ ತನಿಖೆಯಲ್ಲಿ ಇದು ಮಹತ್ವದ ಬೆಳವಣಿಯಾಗಿದೆ. ಹಗರಣದ ಕೇಂದ್ರಬಿಂದು ಎಂದು ಆರೋಪಿಸಿರುವ ಮೂರು ಡೈರಿಗಳ ನಿರ್ದೇಶಕರಿಗೆ ಜಾಮೀನು ನೀಡುವುದನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನೇತೃತ್ವದ ಎಸ್‌ಐಟಿ ತೀವ್ರವಾಗಿ ವಿರೋಧಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆಯಾಗಿದೆ.
ಇದು ನಂಬಿಕೆಯ ದ್ರೋಹವಾಗಿದೆ. ಇದು ಕೇವಲ ಪ್ರಸಾದದಲ್ಲಿ ವಂಚನೆ ಮಾತ್ರವಲ್ಲ,ಟಿಟಿಡಿ ಮಾತ್ರವಲ್ಲದೆ ದೇಶಾದ್ಯಂತ ಕೋಟ್ಯಂತರ ಭಕ್ತರನ್ನು ವಂಚಿಸುವ ಬಹುಕೋಟಿ ಸಂಚು ಎಂದು ಸಿಬಿಐ ನ್ಯಾಯಾಲಯದಲ್ಲಿ ವಾದಿಸಿದೆ. ಮೂರು ಡೈರಿಗಳಾದ ಭೋಲೆಬಾಬಾ, ವೈಷ್ಣವಿ ಮತ್ತು ಎಆರ್ ಡೈರಿ - ಜಂಟಿಯಾಗಿ ದಂಧೆ ನಡೆಸುತ್ತಿದ್ದಾರೆ. ನೂರಾರು ಕೋಟಿ ವ್ಯವಹಾರ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಹಣಕಾಸಿನ ವಂಚನೆಯ ಜೊತೆಗೆ, ಆರೋಪಿಗಳು ತನಿಖೆಯನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಟಿಡಿ ಮಾಜಿ ಅಧ್ಯಕ್ಷರಿಗೆ ಇದೇ ಮೊದಲ ಬಾರಿಗೆ ನೋಟಿಸ್ ನೀಡಲಾಗುತ್ತಿದೆ. ತನಿಖೆಯು ಈಗ ತುಪ್ಪ ಸರಬರಾಜುದಾರರು ಅಲ್ಲದೇ ವೈಎಸ್‌ಆರ್‌ಸಿಪಿ ಕಾಲದಲ್ಲಿ ಸೇವೆ ಸಲ್ಲಿಸಿದ ಟಿಟಿಡಿ ಅಧಿಕಾರಿಗಳನ್ನು ಒಳಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



