ಪದಗಳಿಗೂ ಮೀರಿದ ಹೃದಯವಿದ್ರಾವಕ ದುರಂತ: ಅಹಮದಾಬಾದ್ ವಿಮಾನ ಪತನಕ್ಕೆ ಪ್ರಧಾನಿ ಮೋದಿ ಸಂತಾಪ
ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171 ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ.

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171 ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ.
ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, "ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತ ನಮ್ಮನ್ನು ದಿಗ್ಭ್ರಮೆಗೊಳಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕ ಘಟನೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವ ಬಗ್ಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ" ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



