Air India Plane Crash: ಮೃತಪಟ್ಟವರ ಬಗ್ಗೆ ಅವಹೇಳನಕಾರಿ ಪೋಸ್ಟ್; ಕೇರಳ ಅಧಿಕಾರಿ ಅಮಾನತು
ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿದ್ದ ಪವಿತ್ರನ್ ಅವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.

ತಿರುವನಂತಪುರಂ: ಅಹಮದಾಬಾದ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಕೇರಳದ ನರ್ಸ್ ಬಗ್ಗೆ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಕೇರಳ ಸರ್ಕಾರಿ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿದ್ದ ಪವಿತ್ರನ್ ಅವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಪವಿತ್ರನ್ ಅವರು ಅಪಘಾತದಲ್ಲಿ ಮೃತಪಟ್ಟ ಪಟ್ಟಣಂತಿಟ್ಟದ ನರ್ಸ್ ರಂಜಿತಾ ಅವರನ್ನು ಅಪಹಾಸ್ಯ ಮಾಡಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ.
ಫೇಸ್‌ಬುಕ್ ಪೋಸ್ಟ್‌ನಲ್ಲಿ, ರಾಜ್ಯ ಕಂದಾಯ ಸಚಿವ ಕೆ. ರಾಜನ್, ಪವಿತ್ರನ್ ಅವರ ಹೇಳಿಕೆ "ಅವಮಾನಕರ" ಎಂದು ಟೀಕಿಸಿದ್ದರು ಮತ್ತು ಪೋಸ್ಟ್ ಅವರ ಗಮನಕ್ಕೆ ಬಂದ ತಕ್ಷಣ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ಎರಡು ಮಕ್ಕಳ ತಾಯಿಯಾಗಿರುವ ರಂಜಿತಾ ಅವರು ಯುಕೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ವಿದೇಶದಲ್ಲಿ ಕೆಲಸ ಮಾಡಿದ ನಂತರ ಈಗ ಕೇರಳ ಆರೋಗ್ಯ ಇಲಾಖೆಯಲ್ಲಿ ಅವರಿಗೆ ಕೆಲಸ ಸಿಕ್ಕಿತ್ತು. ಸರ್ಕಾರಿ ಸೇವೆಗೆ ಸೇರಲು ತಮ್ಮ ಕೆಲಸಕ್ಕೆ ಸಂಬಂಧಿಸಿದ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಕೇರಳಕ್ಕೆ ಬಂದಿದ್ದರು. ಆದರೆ ಯುಕೆ ಆಸ್ಪತ್ರೆಯಲ್ಲಿ ಮಾಡಿಕೊಂಡಿದ್ದ ಒಪ್ಪಂದವನ್ನು ಪೂರ್ಣಗೊಳಿಸಲು ಪತನವಾದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು.
ಏತನ್ಮಧ್ಯೆ, ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪತ್ತನಂತಿಟ್ಟ ಜಿಲ್ಲೆಯ ಪುಲ್ಲಾಡ್‌ನಲ್ಲಿರುವ ರಂಜಿತಾ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಇಬ್ಬರು ಮಕ್ಕಳು ಮತ್ತು ದುಃಖಿತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



