NEET UG 2025: ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿದ NTA
ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಎನ್ ಟಿಎ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್: neet.nta.nic.in ನಲ್ಲಿ ಅಂತಿಮ ಕೀ ಉತ್ತರಗಳನ್ನು ನೋಡಬಹುದು ಎಂದು ಸಂಸ್ಥೆ ಘೋಷಿಸಿದೆ.

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮೇ 4 ರಂದು ನಡೆಸಿದ NEET UG 2025 ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಂದು ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ. ವೈದ್ಯಕೀಯ ಪದವಿ ಮತ್ತು ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶವನ್ನು ನಿರ್ಧರಿಸುವ ಪರೀಕ್ಷೆಗೆ 20.87 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.
ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಎನ್ ಟಿಎ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್: neet.nta.nic.in ನಲ್ಲಿ ಅಂತಿಮ ಕೀ ಉತ್ತರಗಳನ್ನು ನೋಡಬಹುದು ಎಂದು ಸಂಸ್ಥೆ ಘೋಷಿಸಿದೆ.
ಜೂನ್ 3 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಯಿತು. ಯಾವುದೇ ವಿವಾದಿತ ಉತ್ತರಗಳಿಗೆ ಸವಾಲುಗಳನ್ನು ಸಲ್ಲಿಸಲು ಅಭ್ಯರ್ಥಿಗಳನ್ನು ಆಹ್ವಾನಿಸಲಾಯಿತು. ಕೀ ಉತ್ತರ ವಿಂಡೋ ಜೂನ್ 5 ರವರೆಗೆ ತೆರೆದಿತ್ತು.
ಈ ವರ್ಷ, ಭಾರತದಾದ್ಯಂತ 4,750 ಕೇಂದ್ರಗಳಲ್ಲಿ ಮತ್ತು ವಿದೇಶಗಳಲ್ಲಿ 14 ಕೇಂದ್ರಗಳಲ್ಲಿ ನಡೆಸಲಾದ ಪರೀಕ್ಷೆಗೆ 20.87 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಶ್ನೆ ಪತ್ರಿಕೆಯು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರದಲ್ಲಿ 180 ಪ್ರಶ್ನೆಗಳನ್ನು ಒಳಗೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


