ದೇಶ

Plane crash: ಮೃತರ ಸಂಬಂಧಿಕರು, ಸಂತ್ರಸ್ತರಿಗೆ ಏರ್ ಇಂಡಿಯಾ 25 ಲಕ್ಷ ರೂ ಮಧ್ಯಂತರ ಪರಿಹಾರ!

ಈ ಮಧ್ಯಂತರ ಪರಿಹಾರ, ಟಾಟಾ ಸನ್ಸ್ ಈಗಾಗಲೇ ಘೋಷಿಸಿರುವ 1 ಕೋಟಿ ರೂಪಾಯಿ ಪರಿಹಾರಕ್ಕೆ ಹೆಚ್ಚುವರಿಯಾಗಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

Plane crash: ಮೃತರ ಸಂಬಂಧಿಕರು, ಸಂತ್ರಸ್ತರಿಗೆ ಏರ್ ಇಂಡಿಯಾ 25 ಲಕ್ಷ ರೂ  ಮಧ್ಯಂತರ ಪರಿಹಾರ!
ಅಪಘಾತಕ್ಕೀಡಾದ ವಿಮಾನದ ಅವಶೇಷಗಳು
Published On :

ಮುಂಬೈ: ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಬಂಧಿಕರು ಹಾಗೂ ಸಂತ್ರಸ್ತರಿಗೆ ರೂ. 25 ಲಕ್ಷ ರೂಪಾಯಿ ಮಧ್ಯಂತರ ಪೇಮೆಂಟ್ (interim payment ) ಒದಗಿಸಲಾಗುವುದು ಎಂದು ಏರ್ ಇಂಡಿಯಾ ಶನಿವಾರ ಪ್ರಕಟಿಸಿದೆ.

ಈ ಮಧ್ಯಂತರ ಪರಿಹಾರ, ಟಾಟಾ ಸನ್ಸ್ ಈಗಾಗಲೇ ಘೋಷಿಸಿರುವ 1 ಕೋಟಿ ರೂಪಾಯಿ ಪರಿಹಾರಕ್ಕೆ ಹೆಚ್ಚುವರಿಯಾಗಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಗುರುವಾರ ಮಧ್ಯಾಹ್ನ ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಸೆಕೆಂಡ್ ಗಳಲ್ಲಿ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ಅಪಘಾತಕ್ಕೀಡಾಗಿ 12 ಸಿಬ್ಬಂದಿ, 241 ಪ್ರಯಾಣಿಕರು ಸೇರಿದಂತೆ 270 ಜನರು ಸಾವನ್ನಪ್ಪಿದ್ದಾರೆ.

"ನಮ್ಮ ನಿರಂತರ ಪ್ರಯತ್ನಗಳ ಭಾಗವಾಗಿ ತಕ್ಷಣದ ಹಣಕಾಸಿನ ಅಗತ್ಯತೆ ಪೂರೈಸಲು ದುರಂತದಲ್ಲಿ ಮೃತಪಟ್ಟವರು ಹಾಗೂ ಸಂತ್ರಸ್ತರ ಕುಟುಂಬಗಳಿಗೆ ತಲಾ ರೂ.25 ಲಕ್ಷ ಮಧ್ಯಂತರ ಪೇಮೆಂಟ್ಒದಗಿಸಲಾಗುವುದು ಎಂದು ಏರ್ ಇಂಡಿಯಾ ಹೇಳಿದೆ.

ಟಾಟಾ ಸನ್ಸ್ ಈಗಾಗಲೇ ಘೋಷಿಸಿರುವ 1 ಕೋಟಿ ಪರಿಹಾರ ಘೋಷಿಸಿದೆ. ಇದು ಹೆಚ್ಚುವರಿಯಾಗಿ ಪ್ರಕಟಿಸಿರುವ ಪರಿಹಾರವಾಗಿದ್ದು, ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಯಾಣಿಕರ ಕುಟುಂಬಗಳಿಗೆ ಏರ್ ಇಂಡಿಯಾ ಒಗ್ಗಟ್ಟಿನಲ್ಲಿ ನಿಂತಿದೆ" ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.