ತಾಂತ್ರಿಕ ದೋಷ: ಲೇಹ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್
ದೆಹಲಿಯಿಂದ ಲೇಹ್‌ಗೆ ಹಾರಾಟ ನಡೆಸುತ್ತಿದ್ದ 6E2006 ವಿಮಾನ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ ನಂತರ ರಾಷ್ಟ್ರ ರಾಜಧಾನಿಗೆ ಮರಳಿದೆ.

ನವದೆಹಲಿ: ದೆಹಲಿಯಿಂದ ಗುರುವಾರ ಬೆಳಗ್ಗೆ ಲೇಹ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ನಂತರ ತಾಂತ್ರಿಕ ಸಮಸ್ಯೆಯಿಂದಾಗಿ ರಾಷ್ಟ್ರ ರಾಜಧಾನಿಗೆ ವಾಪಸ್ ಆಗಿದೆ.
ವಿಮಾನ ಟ್ರ್ಯಾಕಿಂಗ್ ವೆಬ್‌ಸೈಟ್ Flightradar24.com ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ದೆಹಲಿಯಿಂದ ಲೇಹ್‌ಗೆ ಹಾರಾಟ ನಡೆಸುತ್ತಿದ್ದ 6E2006 ವಿಮಾನ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ ನಂತರ ರಾಷ್ಟ್ರ ರಾಜಧಾನಿಗೆ ಮರಳಿದೆ.
"ಜೂನ್ 19, 2025 ರಂದು ದೆಹಲಿಯಿಂದ ಲೇಹ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ 6E 2006, ತಾಂತ್ರಿಕ ಸಮಸ್ಯೆಯಿಂದಾಗಿ ಲೇಹ್‌ನಲ್ಲಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದ ಕಾರಣ ಮೂಲ ಸ್ಥಾನಕ್ಕೆ ಮರಳಿತು. ಕಾರ್ಯವಿಧಾನಗಳ ಪ್ರಕಾರ, ಪೈಲಟ್ ದೆಹಲಿಗೆ ಮರಳಿದರು" ಎಂದು ವಿಮಾನಯಾನ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಮಾನವು ಕಾರ್ಯಾಚರಣೆ ಪುನರಾರಂಭಿಸುವ ಮೊದಲು ಅಗತ್ಯ ಪರಿಶೀಲನೆಗೆ ಒಳಗಾಗುತ್ತಿದೆ ಎಂದು ವಕ್ತಾರರು ಹೇಳಿದ್ದಾರೆ.
ಈ ಮಧ್ಯೆ, ಪ್ರಯಾಣಿಕರು ಲೇಹ್‌ಗೆ ತೆರಳಲು ಪರ್ಯಾಯ ವಿಮಾನ ವ್ಯವಸ್ಥೆ ಮಾಡಲಾಗಿದೆ ಮತ್ತು ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸುವುದಾಗಿ ಎಂದು ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



