ಜಗನ್ನಾಥನ ದರ್ಶನಕ್ಕಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಆಹ್ವಾನ ತಿರಸ್ಕರಿಸಿದೆ: ಪ್ರಧಾನಿ ಮೋದಿ
ಒಡಿಶಾದಲ್ಲಿ ಬಿಜೆಪಿ ಸರ್ಕಾರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು.

ಭುವನೇಶ್ವರ: ಒಡಿಶಾದ ಪುರಿಯಲ್ಲಿರುವ ಜಗನ್ನಾಥನ ದರ್ಶನಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಾಷಿಂಗ್ಟನ್‌ಗೆ ಭೇಟಿ ನೀಡುವ ಆಹ್ವಾನವನ್ನು ತಿರಸ್ಕರಿಸಿದೆ ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಇಂದು ಭುವನೇಶ್ವರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, "ನಾನು ಜಿ7 ಶೃಂಗಸಭೆಗಾಗಿ ಕೆನಡಾದಲ್ಲಿದ್ದಾಗ ಅಮೆರಿಕ ಅಧ್ಯಕ್ಷ ಟ್ರಂಪ್ ನನಗೆ ಕರೆ ಮಾಡಿ, ವಾಷಿಂಗ್ಟನ್‌ಗೆ ಆಹ್ವಾನಿಸಿ, ಔತಣ ಕೂಟದಲ್ಲಿ ಭಾಗವಹಿಸುವಂತೆ ಕೇಳಿಕೊಂಡಿದ್ದರು. ಆದರೆ ನಾನು ಅವರ ಆಹ್ವಾನಕ್ಕಾಗಿ ಧನ್ಯವಾದ ಹೇಳಿ, ಜಗನ್ನಾಥನ ನಾಡು ಒಡಿಶಾಗೆ ಭೇಟಿ ನೀಡಬೇಕಾಗಿದೆ ಎಂದು ತಿಳಿಸಿದೆ. ನಾನು ಅವರ ಆಹ್ವಾನವನ್ನು ವಿನಮ್ರವಾಗಿ ತಿರಸ್ಕರಿಸಿದೆ" ಎಂದರು.
ಒಡಿಶಾದಲ್ಲಿ ಬಿಜೆಪಿ ಸರ್ಕಾರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು ಮತ್ತು ಇದೇ ವೇಳೆ 18,600 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಚಾಲನೆ ನೀಡಿದರು.
ಜಿ7 ಶೃಂಗಸಭೆ ವೇಳೆ ಪ್ರಧಾನಿ ಮೋದಿ ಅವರು, ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಕುರಿತು ಎರಡೂ ದೇಶಗಳ ಪರಸ್ಪರ ಒಪ್ಪಿಗೆ ಬಳಿಕ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸ್ಪಷ್ಟನೆ ನೀಡಿದ್ದರು.
ಜಿ7 ಶೃಂಗಸಭೆಗೆ ಭೇಟಿ ನೀಡಿದ್ದ ವೇಳೆ ಅಮೆರಿಕಗೆ ಭೇಟಿ ನೀಡುವಂತೆ ಟ್ರಂಪ್, ಪ್ರಧಾನಿ ಮೋದಿ ಅವರಿಗೆ ಆಹ್ವಾನಿಸಿದ್ದರು. ಆದರೆ ಮೊದಲೇ ವೇಳಾಪಟ್ಟಿ ನಿಗದಿಯಾಗಿದ್ದ ಹಿನ್ನೆಲೆ ಅಮೆರಿಕಗೆ ಭೇಟಿ ನೀಡಲು ಸಾಧ್ಯವಿಲ್ಲ ಎಂದು ಮೋದಿ ತಿಳಿಸಿರುವುದಾಗಿ ವರದಿಯಾಗಿತ್ತು.

ಅಮೆರಿಕಾ ಭೇಟಿಗೆ Trump ಆಹ್ವಾನ ತಿರಸ್ಕರಿಸಿದ Narendra Modi; Quad ಸಭೆಗೆ ನೀವೇ ಭಾರತಕ್ಕೆ ಬನ್ನಿ- ಪ್ರಧಾನಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



