Air India crash: 247 ಜನರ ಗುರುತು ಪತ್ತೆ, 232 ಮೃತದೇಹ ಹಸ್ತಾಂತರ
ಮೃತ ದೇಹಗಳನ್ನು ಗುರುತಿಸುವ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಜೂನ್ 21 ರಂದು ಸಂಜೆ 6 ಗಂಟೆಯ ಹೊತ್ತಿಗೆ, 247 ಮೃತ ವ್ಯಕ್ತಿಗಳ ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ.

ಅಹಮದಾಬಾದ್: ದೇಶವನ್ನೇ ಬೆಚ್ಚಿಬೀಳಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿ 9 ದಿನಗಳ ನಂತರ, ಡಿಎನ್‌ಎ ಹೊಂದಾಣಿಕೆಯ ಮೂಲಕ ಇದುವರೆಗೆ 147 ಜನರನ್ನು ಗುರುತಿಸಲಾಗಿದೆ ಮತ್ತು 232 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮೃತ ದೇಹಗಳನ್ನು ಗುರುತಿಸುವ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಜೂನ್ 21 ರಂದು ಸಂಜೆ 6 ಗಂಟೆಯ ಹೊತ್ತಿಗೆ, 247 ಮೃತ ವ್ಯಕ್ತಿಗಳ ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ. ಈ ಪೈಕಿ 232 ಶವಗಳನ್ನು ಈಗಾಗಲೇ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.
23 ಶವಗಳನ್ನು ವಿಮಾನದ ಮೂಲಕ ಕಳುಹಿಸಲಾಗಿದೆ ಮತ್ತು 209 ಶವಗಳನ್ನು ಆಂಬ್ಯುಲೆನ್ಸ್ ಮೂಲಕ ಸ್ವಗ್ರಾಮಗಳಿಗೆ ಕರೆದೊಯ್ಯಲಾಗಿದೆ.
ಶೀಘ್ರದಲ್ಲೇ ಉಳಿದ ಶವಗಳನ್ನು ಅವರ ಪ್ರೀತಿಪಾತ್ರರಿಗೆ ಹಸ್ತಾಂತರಿಸಲಾಗುವುದು. ಇನ್ನು 12 ಕುಟುಂಬಗಳು ನಂತರದ ಸಮಯದಲ್ಲಿ ಶವಗಳನ್ನು ಪಡೆಯಲು ಆಯ್ಕೆ ಮಾಡಿಕೊಂಡಿವೆ. ಹೆಚ್ಚುವರಿಯಾಗಿ ಮೂರು ಕುಟುಂಬಗಳು ಡಿಎನ್‌ಎ ವಿಶ್ಲೇಷಣೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜೂನ್ 12 ರಂದು ಮಧ್ಯಾಹ್ನ 1.39ಕ್ಕೆ 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



