ಕೇರಳ ಮಾಜಿ ಮುಖ್ಯಮಂತ್ರಿ VS Achuthanandan ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ
101 ವರ್ಷದ ರಾಜಕಾರಣಿ ಪ್ರಸ್ತುತ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬಕ್ಕೆ ಹತ್ತಿರವಿರುವ ಮೂಲಗಳ ಪ್ರಕಾರ, ಅವರ ಸ್ಥಿತಿ ಸ್ಥಿರವಾಗಿದೆ.

ತಿರುವನಂತಪುರಂ: ಹಿರಿಯ ಕಮ್ಯುನಿಸ್ಟ್ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಗೆ ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
101 ವರ್ಷದ ರಾಜಕಾರಣಿ ಪ್ರಸ್ತುತ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬಕ್ಕೆ ಹತ್ತಿರವಿರುವ ಮೂಲಗಳ ಪ್ರಕಾರ, ಅವರ ಸ್ಥಿತಿ ಸ್ಥಿರವಾಗಿದೆ.
2019 ರಲ್ಲಿ ಪಾರ್ಶ್ವವಾಯುವಿಗೆ ಒಳಗಾದ ನಂತರ ಹಾಸಿಗೆ ಹಿಡಿದಿದ್ದ ಅಚ್ಯುತಾನಂದನ್ ಅವರಿಗೆ ಸೋಮವಾರ ಬೆಳಿಗ್ಗೆ ಹೃದಯಾಘಾತ ಸಂಭವಿಸಿ ಉಸಿರಾಟದ ತೊಂದರೆ ಉಂಟಾಗಿದೆ ಎಂದು ವರದಿಯಾಗಿದೆ. ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದ್ದು ವೈದ್ಯರು ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
1964 ರಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ರಚಿಸಲು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಯಿಂದ ಹೊರನಡೆದ 32 ಜನರಲ್ಲಿ ಅಚ್ಯುತಾನಂದನ್ ಮಾತ್ರ ಉಳಿದ ನಾಯಕರಾಗಿದ್ದರು. ಅವರು ಕೇರಳ ವಿಧಾನಸಭೆಯಲ್ಲಿ ಮೂರು ಬಾರಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದು ಹಲವು ವರ್ಷಗಳ ಕಾಲ ಸಿಪಿಎಂನ ರಾಜ್ಯ ಕಾರ್ಯದರ್ಶಿಯಾಗಿದ್ದರು. ಅವರು 2021 ರವರೆಗೆ ಕೇರಳ ವಿಧಾನಸಭೆಯ ಸಕ್ರಿಯ ಸದಸ್ಯರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



