ದೇಶ

ಮನೆಯಲ್ಲಿ LPG ಗ್ಯಾಸ್ ಸಿಲಿಂಡರ್ ಸೋರಿಕೆ: ಭಾರಿ ಸ್ಫೋಟ; ಇಬ್ಬರು ಪವಾಡ ಸದೃಶ್ಯ ಪ್ರಾಣಪಾಯದಿಂದ ಪಾರು! Video

ಪೈಪ್‌ನೊಂದಿಗೆ ಎಲ್‌ಪಿಜಿ ಸಿಲಿಂಡರ್ ಸೋರಿಕೆಯಾಗುತ್ತಿದ್ದು, ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಗ್ಯಾಸ್ ಸೋರಿಕೆಯನ್ನು ತಡೆಯಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಮನೆಯಲ್ಲಿ LPG ಗ್ಯಾಸ್ ಸಿಲಿಂಡರ್ ಸೋರಿಕೆ: ಭಾರಿ ಸ್ಫೋಟ; ಇಬ್ಬರು ಪವಾಡ ಸದೃಶ್ಯ ಪ್ರಾಣಪಾಯದಿಂದ ಪಾರು! Video
ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆ
Published On :

ಮುಂಬೈ: ಮನೆಯೊಳಗೆ ಅಡುಗೆ ಅನಿಲ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಭಾರೀ ಸ್ಪೋಟದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಪ್ರಾಣಾಪಾಯದಿಂದ ಪವಾಡ ಸದೃಶವಾಗಿ ಪಾರಾಗಿರುವ ಆಘಾತಕಾರಿ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಮನೆ ತುಂಬ ಬೆಂಕಿ ಆವರಿಸಿಕೊಂಡಿದ್ದು, ಅವರು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿರುವುದು ವೀಡಿಯೊದಲ್ಲಿದೆ.

ಘಟನೆಯ ನಿಖರವಾದ ಸ್ಥಳ ತಿಳಿದಿಲ್ಲ, ಆದರೆ ಜೂನ್ 18 ರಂದು ಮಧ್ಯಾಹ್ನ 3 ಗಂಟೆಗೆ ಘಟನೆ ಸಂಭವಿಸಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳು ತೋರಿಸುತ್ತದೆ. ಪೈಪ್‌ನೊಂದಿಗೆ ಎಲ್‌ಪಿಜಿ ಸಿಲಿಂಡರ್ ಸೋರಿಕೆಯಾಗುತ್ತಿದ್ದು, ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಗ್ಯಾಸ್ ಸೋರಿಕೆಯನ್ನು ತಡೆಯಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಆದರೆ ಗ್ಯಾಸ್ ಸೋರಿಕೆ ತಡೆಯಲು ಸಾಧ್ಯವಾಗಲ್ಲ. ತದನಂತರ ಆಕೆ ಸಹಾಯ ಪಡೆಯಲು ಮನೆಯಿಂದ ಹೊರಗೆ ಹೋಗುತ್ತಾರೆ.

ಆದರೆ ಮನೆಯೊಳಗೆ ಅನಿಲ ಸೋರಿಕೆಯಾಗುತ್ತಲೇ ಇರುತ್ತದೆ. ಕೆಲ ನಿಮಿಷಗಳ ನಂತರ ಒಬ್ಬ ವ್ಯಕ್ತಿಯೊಂದಿಗೆ ಮಹಿಳೆ ಸ್ಥಳಕ್ಕೆ ಆಗಮಿಸುತ್ತಾರೆ. ಬೇರೆ ಬಾಗಿಲಿನಿಂದ ಮಹಿಳೆ ಕೊಠಡಿ ಪ್ರವೇಶಿಸಿದರೆ, ಪುರುಷನು ಇನ್ನೊಂದು ಭಾಗಿಲಿನಿಂದ ಪ್ರವೇಶಿಸುತ್ತಾನೆ. ಇಬ್ಬರೂ ಸಿಲಿಂಡರ್ ಹತ್ತಿರ ಹೋಗಿ ಗ್ಯಾಸ್ ಪೈಪ್‌ನ ನಾಬ್ ಅನ್ನು ಮುಚ್ಚುವ ಮೂಲಕ ಗ್ಯಾಸ್ ಸೋರಿಕೆಯನ್ನು ತಡೆಯಲು ಪ್ರಯತ್ನಿಸುವಾಗ ಅಡುಗೆಮನೆಯೊಳಗೆ ಭಾರಿ ಸ್ಫೋಟ ಸಂಭವಿಸಿ, ಬೆಂಕಿಯು ಇಡೀ ಕೊಠಡಿಯನ್ನು ಆವರಿಸುತ್ತದೆ.

ಅದೃಷ್ಟವಶಾತ್, ಮಹಿಳೆ ಗ್ಯಾಸ್ ಲೀಕ್ ಸಮಯದಲ್ಲಿ ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿದ್ದರು. ಇದು ಸ್ಫೋಟದ ಪ್ರಭಾವವನ್ನು ಕಡಿಮೆ ಮಾಡಿದೆ. ಭಾರೀ ಸ್ಫೋಟದಿಂದ ಮಹಿಳೆ ಮತ್ತು ಪುರುಷ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಡುಗೆ ಮನೆಯೊಳಗೆ ಇರಿಸಲಾಗಿದ್ದ ಗ್ಯಾಸ್ ಸ್ಟೌವ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಇಡೀ ಮನೆಗೆ ವ್ಯಾಪಿಸಿದ್ದನ್ನು ವಿಡಿಯೋದಲ್ಲಿ ಕಾಣಬಹುದು. ಆದಾಗ್ಯೂ, ಕಡಿಮೆ ತೀವ್ರತೆಯ ಸ್ಫೋಟದಿಂದಾಗಿ ಮಹಿಳೆ ಮತ್ತು ಪುರುಷ ಯಾವುದೇ ಗಾಯಗಳಿಲ್ಲದೆ ಮನೆಯಿಂದ ಪಾರಾಗಿದ್ದಾರೆ.

ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಿನ ಜನರು ಹಂಚಿಕೊಳ್ಳುತ್ತಿದ್ದು, ಎಲ್ಲಾ ಬಾಗಿಲುಗಳು ಮತ್ತು ಕಿಟಕಿಗಳು ತೆರೆದಿದ್ದರಿಂದ ಅವರ ಪ್ರಾಣ ಉಳಿದಿದೆ ಎಂದು ಅನೇಕ ಎಕ್ಸ್ ಬಳಕೆದಾರರು ಪ್ರತಿಕ್ರಿಯಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.