ಒಂದು ವರ್ಷದಿಂದ ಈ ಭಯೋತ್ಪಾದಕನಿಗಾಗಿ ಹುಡುಕಾಟ: ಭಾರತೀಯ ಸೇನೆ ಗುಂಡಿಗೆ ಕೊನೆಗೂ Jaish ಉಗ್ರ ಹತ
ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಭದ್ರತಾ ಪಡೆಗಳು ದೊಡ್ಡ ಯಶಸ್ಸನ್ನು ಸಾಧಿಸಿವೆ.

ಶ್ರೀನಗರ: ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಭದ್ರತಾ ಪಡೆಗಳು ದೊಡ್ಡ ಯಶಸ್ಸನ್ನು ಸಾಧಿಸಿವೆ. ಸೇನೆಯು ಒಬ್ಬ ಭಯೋತ್ಪಾದಕನನ್ನು ಕೊಂದಿದ್ದು, ಮೂವರನ್ನು ಸುತ್ತುವರೆದಿದ್ದಾರೆ ಎಂದು ವರದಿಯಾಗಿದೆ. ಎರಡೂ ಕಡೆಯಿಂದ ಗುಂಡಿನ ದಾಳಿ ನಡೆಯುತ್ತಿದೆ. ಎನ್‌ಕೌಂಟರ್‌ನಲ್ಲಿ ಹತನಾದ ಭಯೋತ್ಪಾದಕ ಜೈಶ್-ಎ-ಮೊಹಮ್ಮದ್‌ಗೆ ಸೇರಿದವನು.
ಬಸಂತ್‌ಗಢದ ಬಿಹಾಲಿ ಪ್ರದೇಶದಲ್ಲಿ ಭಯೋತ್ಪಾದಕರು ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿಯ ಮೇರೆಗೆ, ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ತಮ್ಮನ್ನು ಸುತ್ತುವರೆದಿರುವುದನ್ನು ನೋಡಿದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು. ಈ ಉಗ್ರನಿಗಾಗಿ ಭದ್ರತಾ ಪಡೆಗಳು ಒಂದು ವರ್ಷದಿಂದ ಹುಡುಕಾಟ ನಡೆಸುತ್ತಿತ್ತು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



