ಕ್ಯಾಬಿನ್‌ನಲ್ಲಿ ಸುಟ್ಟ ವಾಸನೆ: ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈಗೆ ವಾಪಸ್!
ಶನಿವಾರ ಚೆನ್ನೈಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ನಲ್ಲಿ ಸುಟ್ಟ ವಾಸನೆ ಕಂಡುಬಂದಿದೆ. ತದನಂತರ ಮುಂಬೈಗೆ ವಿಮಾನ ಮರಳಬೇಕಾಯಿತು.

ಮುಂಬೈ: ದೇಶದಲ್ಲಿ ಇತ್ತೀಚಿಗೆ ಸಂಭವಿಸಿದ ಅಹಮದಾಬಾದ್ ವಿಮಾನ ದುರಂತ ಸೇರಿದಂತೆ ಕೆಲ ವಿಮಾನ ತುರ್ತು ಲ್ಯಾಂಡಿಂಗ್, ಹುಸಿ ಬಾಂಬ್ ಬೆದರಿಕೆಯಂತಹ ಪ್ರಕರಣಗಳು ಮರು ಕಳಿಸುತ್ತಿದ್ದು, ಜನರು ವಿಮಾನದಲ್ಲಿ ಪ್ರಯಾಣಿಸಲು ಆತಂಕಪಡುವಂತಾಗಿದೆ.
ಇದೇ ರೀತಿ ಶನಿವಾರ ಚೆನ್ನೈಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ನಲ್ಲಿ ಸುಟ್ಟ ವಾಸನೆ ಕಂಡುಬಂದಿದೆ. ತದನಂತರ ಮುಂಬೈಗೆ ವಿಮಾನ ಮರಳಬೇಕಾಯಿತು. ಆದರೆ, ವಾಪಸ್ಸಾದ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.
ಮುಂಬೈಯಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ AI 639 ವಿಮಾನದಲ್ಲಿ ಸುಟ್ಟ ವಾಸನೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮುಂಬೈಗೆ ಮರಳಿದೆ ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.
ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ವಿಮಾನ ಬದಲಾವಣೆ ಪ್ರಾರಂಭಿಸಲಾಯಿತು. ಈ ಅನಿರೀಕ್ಷಿತ ಘಟನೆಯಿಂದ ಪ್ರಯಾಣಿಕರಿಗೆ ಆದ ಅನಾನುಕೂಲವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಬೆಂಬಲ ಒದಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

Ahmedabad plane crash: ಡಿಎನ್ಎ ಹೊಂದಾಣಿಕೆ, ಕೊನೆಯ ಮೃತದೇಹ ಕುಟುಂಬಕ್ಕೆ ಹಸ್ತಾಂತರ; ಒಟ್ಟು ಮೃತರ ಸಂಖ್ಯೆ 260
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


