ತಿರುಪತಿ ಬಳಿ ಭೀಕರ ಅಪಘಾತ: ಟೆಂಪೋ ಟ್ರಾವೆಲರ್ ಗೆ ಲಾರಿ ಡಿಕ್ಕಿ; ಕರ್ನಾಟಕದ ಮೂವರು ದುರ್ಮರಣ, 12 ಮಂದಿಗೆ ಗಾಯ
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮದನಪಲ್ಲಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ತಿರುಪತಿ: ಅತಿವೇಗದಿಂದ ಬಂದ ಲಾರಿಯೊಂದು ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಮೂವರು ಸಾವನ್ನಪ್ಪಿದ್ದು, ಇತರ ಹನ್ನೆರಡು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿ ಬಳಿ ಸೋಮವಾರ ಮುಂಜಾನೆ ನಡೆದಿದೆ.
ಅನ್ನಮಯ್ಯ ಜಿಲ್ಲೆಯ ಕುರಬಳಕೋಟ ಮಂಡಲದ ಚೆನ್ನಮರ್ರಿ ಬಳಿ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಬಾಗೇಪಲ್ಲಿ ನಿವಾಸಿಗಳಾದ ಮೇಘರಾಜ್ (17), ಚರಣ್ (17), ಮತ್ತು ಶ್ರಾವಣಿ (28) ಮೃತಪಟ್ಟಿದ್ದಾರೆ.
ಮದನಪಲ್ಲಿಯಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಹನ್ನೆರಡು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮದನಪಲ್ಲಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಗಾಯಾಳುಗಳೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿಕ್ಕಿ ಹೊಡೆದ ಲಾರಿ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಐ ಸತ್ಯನಾರಾಯಣ ತಿಳಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆಂಧ್ರಪ್ರದೇಶದ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಅವರು ಭೀಕರ ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳ ಸ್ಥಿತಿಗತಿ ವಿಚಾರಿಸಿದ ಅವರು, ತಕ್ಷಣವೇ ವೈದ್ಯಕೀಯ ಸೇವೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಪರಿಹಾರ ಕ್ರಮಗಳನ್ನು ತ್ವರಿತಗೊಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



