ನ್ಯೂಸ್ ಚಾನೆಲ್ ಚರ್ಚಾ ಕಾರ್ಯಕ್ರಮದಲ್ಲಿ ಕೇಸರಿ ಬಟ್ಟೆ ಧರಿಸಿದವರಿಂದ ಹಲ್ಲೆ, IIT ಬಾಬಾ ಆರೋಪ!
ಕೇಸರಿ ಬಟ್ಟೆ ಧರಿಸಿದ ಕೆಲವರು ನ್ಯೂಸ್ ರೂಮ್ ಗೆ ಬಂದು ತಮ್ಮದೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಲ್ಲದೇ ದೊಣ್ಣೆಯಿಂದ ಹೊಡೆದಿದ್ದಾರೆ ಎಂದು ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ನೋಯ್ಡಾ: ಮಹಾಕುಂಭ ಮೇಳದಲ್ಲಿ ಪ್ರಸಿದ್ಧಿಯಾದ 'IIT ಬಾಬಾ'' ಅಲಿಯಾಸ್ ಅಭಯ್ ಸಿಂಗ್ ಮೇಲೆ ಶುಕ್ರವಾರ ನ್ಯೂಸ್ ಚಾನೆಲ್ ವೊಂದರಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಕೇಸರಿ ಬಟ್ಟೆ ಧರಿಸಿದ ಕೆಲವರು ನ್ಯೂಸ್ ರೂಮ್ ಗೆ ಬಂದು ತಮ್ಮದೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಲ್ಲದೇ ದೊಣ್ಣೆಯಿಂದ ಹೊಡೆದಿದ್ದಾರೆ ಎಂದು ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ಹಲ್ಲೆ ಘಟನೆ ಖಂಡಿಸಿ ಅಭಯ್ ಸಿಂಗ್ ಅವರು ನೋಯ್ಡಾದ ಸೆಕ್ಟರ್ 126ರಲ್ಲಿನ ಪೊಲೀಸ್ ಔಟ್ ಪೋಸ್ಟ್ ನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರ ಮನವೊಲಿಕೆ ಬಳಿಕ ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು SHO ಭೂಪೇಂದ್ರ ಸಿಂಗ್ ತಿಳಿಸಿದ್ದಾರೆ.

IIT Baba: ಮಹಾಕುಂಭ ಮೇಳದಲ್ಲಿ ಐಐಟಿ ಪದವೀಧರ ಬಾಬಾ; Aerospace Engineer to 'ಸನ್ಯಾಸ'... ಕಾರಣವಾದ ಘಟನೆ?
ಉತ್ತರ ಪ್ರದೇಶದಲ್ಲಿ ಪ್ರಯಾಗ್ ರಾಜ್ ನಲ್ಲಿ ಇತ್ತೀಚಿಗೆ ನಡೆದ ಕುಂಭ ಮೇಳದಲ್ಲಿ ಐಐಟಿ ಬಾಂಬೆಯಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ಓದಿದ ಸಾಧುವೊಬ್ಬರು ತನ್ನನ್ನು IIT ಬಾಬಾ ಎಂದು ಕರೆದುಕೊಂಡು ನೆಟ್ಟಿಗರ ಗಮನ ಸೆಳೆದಿದ್ದರು.
ICC ಚಾಂಫಿಯನ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಸೋಲಲಿದೆ ಎಂದು ಹೇಳುವ ಮೂಲಕ ಟ್ರೋಲ್ ಗೆ ಆಹಾರವಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


