ದೇಶ

ಕಾಸರಗೋಡು: WhatsApp ಮೂಲಕ ತ್ರಿವಳಿ ತಲಾಖ್, ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಕಲ್ಲೂರವಿಯ 21 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ ನಂತರ ಅಬ್ದುಲ್ ರಜಾಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಾಸರಗೋಡು: WhatsApp ಮೂಲಕ ತ್ರಿವಳಿ ತಲಾಖ್, ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Published On :

ಕಾಸರಗೋಡು: ವಾಟ್ಸಾಪ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ಘೋಷಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾಸರಗೋಡು ಸಮೀಪದ ನೆಲ್ಲಿಕಟ್ಟೆಯ ಅಬ್ದುಲ್ ರಜಾಕ್ ಎಂಬಾತನ ವಿರುದ್ಧ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಲ್ಲೂರವಿಯ 21 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ ನಂತರ ಅಬ್ದುಲ್ ರಜಾಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆಕೆ ಫೆಬ್ರವರಿ 21 ರಂದು ವಾಟ್ಸಾಪ್ ವಾಯ್ಸ್ ಸಂದೇಶದ ಮೂಲಕ ಪತಿ ವಿಚ್ಛೇದನ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.

ಗಲ್ಫ್ ನಲ್ಲಿ ಕೆಲಸ ಮಾಡುತ್ತಿರುವ ರಜಾಕ್ ಯುನೈಟೆಡ್ ಅರಬ್ ಎಮರೈಟ್ಸ್ ನಿಂದ ಮಹಿಳೆಯ ತಂದೆಯ ವಾಟ್ಸಾಪ್ ಸಂಖ್ಯೆಗೆ ತಲಾಖ್ ಸಂದೇಶ ಕಳುಹಿಸಿದ್ದಾರೆ. ತನ್ನ ಪತಿಯ ಕುಟುಂಬ ನಿರಂತರವಾಗಿ ವರದಕ್ಷಿಣೆ ಕಿರುಕುಳ ನೀಡುತ್ತಿದೆ ಎಂದು ಮಹಿಳೆ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ. ಅಬ್ದುಲ್ ರಜಾಕ್ ರೂ.12 ಲಕ್ಷ ವಂಚಿಸಿದ್ದಾರೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ.

ಮಹಿಳೆಯ ಕುಟುಂಬದ ದೂರಿನ ಮೇರೆಗೆ ಪೊಲೀಸರು ಭಾನುವಾರ ಅಬ್ದುಲ್ ರಜಾಕ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 351 (4) ಅಡಿಯಲ್ಲಿ ಕ್ರಿಮಿನಲ್ ಬೆದರಿಕೆ ಹಾಗೂ ಮುಸ್ಲಿಂ ಮಹಿಳೆಯರ ( ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.