ಅಗಸ್ಟಾವೆಸ್ಟ್‌ಲ್ಯಾಂಡ್ ಹಗರಣ: ಕ್ರಿಶ್ಚಿಯನ್ ಮೈಕೆಲ್‌ಗೆ ಹೈಕೋರ್ಟ್ ಜಾಮೀನು
ಜಾಮೀನು ಕೋರಿ ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಫೆಬ್ರವರಿ 28 ರಂದು ತೀರ್ಪು ಕಾಯ್ದಿರಿಸಿದ್ದರು.

ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಫೆಬ್ರವರಿ 28 ರಂದು ತೀರ್ಪು ಕಾಯ್ದಿರಿಸಿದ್ದರು. ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
ED ಪರ ವಕೀಲರು ಮೈಕೆಲ್ ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು ಮತ್ತು ಜಾಮೀನು ನೀಡಿದರೆ ಆರೋಪಿ ತನ್ನ ದೇಶಕ್ಕೆ ತೆರಳುವ ಅಪಾಯವಿದೆ ಎಂದು ಹೇಳಿದರು.
ಆದರೆ ಮೈಕೆಲ್ ಈಗಾಗಲೇ ಸಾಕಷ್ಟು ಸಮಯವನ್ನು ಕಸ್ಟಡಿಯಲ್ಲಿ ಕಳೆದಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ ವಿಧಿಸಬಹುದು. ಆದರೆ ಆರೋಪಿ ಈಗಾಗಲೇ 6 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ. ಹಾಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.
ಇಟಾಲಿಯನ್ ಕಂಪನಿ ಆಗಸ್ಟಾವೆಸ್ಟ್‌ಲ್ಯಾಂಡ್‌ನಿಂದ 12 ವಿವಿಐಪಿ ಹೆಲಿಕಾಪ್ಟರ್‌ಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ತನಿಖಾ ಸಂಸ್ಥೆಗಳು ಆರೋಪಿಸಿದ್ದವು. ಈ ಹಗರಣದ ಪ್ರಮುಖ ಆರೋಪಿ ಕ್ರಿಶ್ಚಿಯನ್ ಮೈಕೆಲ್ ಅವರನ್ನು ಡಿಸೆಂಬರ್ 4, 2018 ರಂದು ದುಬೈನಲ್ಲಿ ಬಂಧಿಸಿ ಭಾರತಕ್ಕೆ ಕರೆ ತರಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



