ಮಹಾರಾಷ್ಟ್ರ ವಿಧಾನಸಭೆಯಿಂದ ಎಸ್‌ಪಿ ಶಾಸಕ ಅಬು ಅಜ್ಮಿ ಅಮಾನತು
ಔರಂಗಜೇಬನನ್ನು ಎಸ್‌ಪಿ ಶಾಸಕ ಹೊಗಳುವ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಅವರ ಪುತ್ರ ಛತ್ರಪತಿ ಸಂಭಾಜಿ ಮಹಾರಾಜ್ ಅವರನ್ನು ಅವಮಾನಿಸಲಾಗಿದೆ ಎಂದು ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಟೀಕಾಪ್ರಹಾರ ನಡೆಸಿದರು.

ಮುಂಬೈ: ಔರಂಗಜೇಬನನ್ನು ಹೊಗಳಿ ತೀವ್ರ ಟೀಕೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರನ್ನು ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಿಂದ ಬುಧವಾರ ಅಮಾನತುಗೊಳಿಸಲಾಗಿದೆ.
ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಮುಗಿಯುವವರೆಗೂ ಅಬು ಅಜ್ಮಿ ಅವರನ್ನು ಅಮಾನತು ಮಾಡಲಾಗಿದೆ. ವಿಧಾನಸಭೆಯ ಬಜೆಟ್ ಅಧಿವೇಶನ ಮಾರ್ಚ್ 26ರ ವರೆಗೆ ನಡೆಯಲಿದೆ. ಅಲ್ಲಿಯವರೆಗೂ ಅಬು ಅಜ್ನಿ ಅಮಾನತಿನಲ್ಲಿ ಇರಲಿದ್ದಾರೆ.
ಸಚಿವ ಚಂದ್ರಕಾಂತ್ ಪಾಟೀಲ್ ಅವರು ಇಂದು ಸದನದಲ್ಲಿ ಅಬು ಅಜ್ಮಿ ಅವರನ್ನು ಸದನದಿಂದ ಅಮಾನತು ಮಾಡುವ ಪ್ರಸ್ತಾವನೆ ಮಂಡಿಸಿದರು. ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು. ಬಳಿಕ ಎಸ್‌ಪಿ ಶಾಸಕ ಸದನದಿಂದ ಅಮಾನತಾಗಿದ್ದಾಗಿ ಸ್ಪೀಕರ್ ತಿಳಿಸಿದರು.
ಹಿಂದುಗಳ ವಿರೋಧಿ ಮತ್ತು ಕ್ರೂರ ಆಡಳಿತಗಾರ ಔರಂಗಜೇಬನನ್ನು ಎಸ್‌ಪಿ ಶಾಸಕ ಹೊಗಳುವ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಅವರ ಪುತ್ರ ಛತ್ರಪತಿ ಸಂಭಾಜಿ ಮಹಾರಾಜ್ ಅವರನ್ನು ಅವಮಾನಿಸಲಾಗಿದೆ ಎಂದು ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಟೀಕಾಪ್ರಹಾರ ನಡೆಸಿದರು.
"ನನ್ನ ಮಾತುಗಳನ್ನು ತಿರುಚಲಾಗಿದೆ. ಇತಿಹಾಸಕಾರರು ಮತ್ತು ಬರಹಗಾರರು ಹೇಳಿದ್ದನ್ನು ನಾನು ಹೇಳಿದ್ದೇನೆ. ನಾನು ಛತ್ರಪತಿ ಶಿವಾಜಿ ಮಹಾರಾಜ್, ಸಂಭಾಜಿ ಮಹಾರಾಜ್ ಅಥವಾ ಇತರ ಯಾವುದೇ ಮಹಾನ್ ವ್ಯಕ್ತಿಗಳ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆ ನೀಡಿಲ್ಲ - ಆದರೆ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ನಾನು ನನ್ನ ಮಾತುಗಳನ್ನು, ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ. ಈ ವಿಷಯವನ್ನು ರಾಜಕೀಯ ವಿಷಯವನ್ನಾಗಿ ಮಾಡಲಾಗುತ್ತಿದೆ ಎಂದು ನಿನ್ನೆ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಹೇಳಿದ್ದರು.
"ಔರಂಗಜೇಬನ ಆಳ್ವಿಕೆಯಲ್ಲಿ ಭಾರತದ ಗಡಿ ಅಫ್ಘಾನಿಸ್ತಾನ ಮತ್ತು ಬರ್ಮಾವರೆಗೂ(ಮ್ಯಾನ್ಮಾರ್) ವ್ಯಾಪಿಸಿತ್ತು. ವಿಶ್ವದ ಜಿಡಿಪಿಯಲ್ಲಿ ದೇಶದ ಜಿಡಿಪಿಯು ಶೇಕಡಾ 24 ರಷ್ಟಿತ್ತು. ಭಾರತವನ್ನು ಆತನ ಆಡಳಿತದಲ್ಲಿ 'ಚಿನ್ನದ ಗುಬ್ಬಚ್ಚಿ' ಎಂದು ಕರೆಯಲಾಗುತ್ತಿತ್ತು" ಎಂದು ಅಬು ಅಜ್ಮಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



