ಮಣಿಪುರದಲ್ಲಿ ಮತ್ತೆ ಘರ್ಷಣೆ: ಒಬ್ಬರು ಸಾವು, 25 ಮಂದಿಗೆ ಗಾಯ
ಮೃತರನ್ನು 30 ವರ್ಷದ ಲಾಲ್‌ಗೌತಾಂಗ್ ಸಿಂಗ್ಸಿಟ್ ಎಂದು ಗುರುತಿಸಲಾಗಿದೆ.

ಇಂಫಾಲ: ಗಲಭೆ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ನಂತರ ಮತ್ತೆ ಘರ್ಷಣೆ ನಡೆದಿದೆ. ಶನಿವಾರ ಕಾಂಗ್‌ಪೊಕ್ಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕುಕಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಒಬ್ಬ ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ . ಮಹಿಳೆಯರು ಸೇರಿದಂತೆ 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು 30 ವರ್ಷದ ಲಾಲ್‌ಗೌತಾಂಗ್ ಸಿಂಗ್ಸಿಟ್ ಎಂದು ಗುರುತಿಸಲಾಗಿದೆ. ಕೀಥೆಲ್‌ಮಂಬಿಯಲ್ಲಿ ನಡೆದ ಘರ್ಷಣೆಯ ವೇಳೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ
ಗಮ್ಗಿಫೈ, ಮೋಟ್‌ಬಂಗ್ ಮತ್ತು ಕೀಥೆಲ್‌ಮಂಬಿಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಕನಿಷ್ಠ 25 ಪ್ರತಿಭಟನಾಕಾರರು ವಿವಿಧ ರೀತಿಯಲ್ಲಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯಾದ್ಯಂತ ಸಾರ್ವಜನಿಕ ಸಂಚಾರವನ್ನು ಮುಕ್ತಗೊಳಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ದೇಶನ ವಿರೋಧಿಸಿ ಕುಕಿ ಪ್ರಾಬಲ್ಯದ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ ನಂತರ ಪ್ರತಿಭಟನೆ ತೀವ್ರಗೊಂಡಿದೆ.
ಪ್ರತಿಭಟನಾಕಾರರು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಇಂಫಾಲ್‌ನಿಂದ ಸೇನಾಪತಿ ಜಿಲ್ಲೆಗೆ ಪ್ರಯಾಣಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆಯಲು ಪ್ರಯತ್ನಿಸಿದಾಗ ಪರಿಸ್ಥಿತಿ ಹದಗೆಟ್ಟಿತು ಎಂದು ಪೊಲೀಸರು ತಿಳಿಸಿದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



