ಭೀಕರ: ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ 4 ಕಾರ್ಮಿಕರ ಸಾವು!
ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಮುಂಬೈ: ಮುಂಬೈನಲ್ಲಿ ಭೀಕರ ದುರಂತ ಸಂಭವಿಸಿದ್ದು, ನೀರಿನ ಟ್ಯಾಂಕ್ ಸ್ವಚ್ಚಗೊಳಿಸಲು ಹೋದ 4 ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಹೌದು.. ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಗಪಡ ಪ್ರದೇಶದ ಡಿಮ್ಟಿಮ್ಕರ್ ರಸ್ತೆಯಲ್ಲಿರುವ ಬಿಸ್ಮಿಲ್ಲಾ ಸ್ಪೇಸ್ ಕಟ್ಟಡದಲ್ಲಿ ಮಧ್ಯಾಹ್ನ 12.30 ರ ಸುಮಾರಿಗೆ ಈ ಘಟನೆ ವರದಿಯಾಗಿದೆ. ನಿರ್ಮಾಣ ಸ್ಥಳದಲ್ಲಿದ್ದ ಇತರರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಸರ್ಕಾರಿ ಜೆಜೆ ಆಸ್ಪತ್ರೆಗೆ ಕರೆದೊಯ್ದರು. ಆದಾಗ್ಯೂ, ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೃಹನ್ಮುಂಬೈ ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಪೊಲೀಸರ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಭೀಕರ ಅಪಘಾತದಲ್ಲಿ ಐವರು ಸಾವು; ಚಿಕ್ಕಬಳ್ಳಾಪುರದಲ್ಲಿ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


