ದೇಶ

ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಏಮ್ಸ್ ಗೆ ದಾಖಲು: ಶೀಘ್ರ ಚೇತರಿಕೆಗಾಗಿ ಪ್ರಧಾನಿ ಪ್ರಾರ್ಥನೆ

"ಏಮ್ಸ್‌ಗೆ ತೆರಳಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಜಿ ಅವರ ಆರೋಗ್ಯ ವಿಚಾರಿಸಿದೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಮೋದಿ ಆನ್‌ಲೈನ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಏಮ್ಸ್ ಗೆ ದಾಖಲು: ಶೀಘ್ರ ಚೇತರಿಕೆಗಾಗಿ ಪ್ರಧಾನಿ ಪ್ರಾರ್ಥನೆ
ಉಪರಾಷ್ಟ್ರಪತಿ ಜಗದೀಪ್ ಧನ್ಕರ್ — online desk
Published On :

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅಸ್ವಸ್ಥತೆ ಮತ್ತು ಎದೆ ನೋವಿನಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಏಮ್ಸ್ ಗೆ ಭೇಟಿ ನೀಡಿದ್ದು, ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಆರೋಗ್ಯ ವಿಚಾರಿಸಿದರು. ಉಪರಾಷ್ಟ್ರಪತಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

"ಏಮ್ಸ್‌ಗೆ ತೆರಳಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಜಿ ಅವರ ಆರೋಗ್ಯ ವಿಚಾರಿಸಿದೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಮೋದಿ ಆನ್‌ಲೈನ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಕೂಡ ಧನ್ಕರ್ ಅವರ ಆರೋಗ್ಯ ವಿಚಾರಿಸಲು ಬೆಳಿಗ್ಗೆ ಏಮ್ಸ್‌ಗೆ ಭೇಟಿ ನೀಡಿದ್ದರು.

ಧನ್ಕರ್ ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಏಮ್ಸ್‌ಗೆ ಕರೆದೊಯ್ಯಲಾಯಿತು. ಅವರನ್ನು ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ನೇತೃತ್ವದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ (ಸಿಸಿಯು) ಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅವರು ಈಗ ಸ್ಥಿರವಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಅದು ತಿಳಿಸಿದೆ. 73 ವರ್ಷದ ನಾಯಕ ವೈದ್ಯರ ಗುಂಪಿನ ವೀಕ್ಷಣೆಯಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.