ದೇಶ

ಹೊಲದಲ್ಲಿ ಕುಳಿತಿದ್ದ ವೇಳೆ ವಿಷದ ಇಂಜೆಕ್ಷನ್ ಚುಚ್ಚಿದ ಅಪರಿಚಿತರು; ಬಿಜೆಪಿ ನಾಯಕ ಸಾವು!

ಯಾದವ್ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು ಬಿಜೆಪಿ ಟಿಕೆಟ್‌ನಲ್ಲಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎನ್ನಲಾಗಿದೆ.

ಹೊಲದಲ್ಲಿ ಕುಳಿತಿದ್ದ ವೇಳೆ ವಿಷದ ಇಂಜೆಕ್ಷನ್ ಚುಚ್ಚಿದ ಅಪರಿಚಿತರು; ಬಿಜೆಪಿ ನಾಯಕ ಸಾವು!
ಪ್ರಾತಿನಿಧಿಕ ಚಿತ್ರ (Image- ಪ್ರಾತಿನಿಧಿಕ ಚಿತ್ರ)
Published On :

ಸಂಭಾಲ್: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬಿಜೆಪಿ ನಾಯಕನೊಬ್ಬನಿಗೆ ಮೂವರು ಅಪರಿಚಿತ ವ್ಯಕ್ತಿಗಳು ವಿಷಕಾರಿ ವಸ್ತುವನ್ನು ಚುಚ್ಚಿದ್ದರಿಂದ ಅವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೃತ್ತ ಅಧಿಕಾರಿ (ಗುನ್ನೌರ್) ದೀಪಕ್ ತಿವಾರಿ ಮಾತನಾಡಿ, 'ಸೋಮವಾರ ಸಂಜೆ ಜುನಾವೈ ಪೊಲೀಸ್ ಠಾಣೆ ವ್ಯಾಪ್ತಿಯ ದಫ್ತಾರಾ ಗ್ರಾಮದಲ್ಲಿರುವ ತಮ್ಮ ಜಮೀನಿನಲ್ಲಿ ಗುಲ್ಫಾಮ್ ಸಿಂಗ್ ಯಾದವ್ (60) ಕುಳಿತಿದ್ದಾಗ, ಮೂವರು ವ್ಯಕ್ತಿಗಳು ಮೋಟಾರ್ ಸೈಕಲ್‌ನಲ್ಲಿ ಅಲ್ಲಿಗೆ ಬಂದಿದ್ದಾರೆ. ಬಳಿಕ ವಿಷದ ಇಂಜೆಕ್ಷನ್ ಚುಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ' ಎಂದು ತಿಳಿಸಿದ್ದಾರೆ.

'ಯಾದವ್ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಆಲಿಘರ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗಮಧ್ಯೆಯಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ. ಸದ್ಯ ಸಂತ್ರಸ್ತರ ಕುಟುಂಬಸ್ಥರಿಂದ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ. ಪ್ರಕರಣದ ತನಿಖೆಗಾಗಿ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ' ಎಂದು ತಿಳಿಸಿದರು.

ಯಾದವ್ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು ಬಿಜೆಪಿ ಟಿಕೆಟ್‌ನಲ್ಲಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.