ನವದೆಹಲಿ: ಕೇಜ್ರಿವಾಲ್ ವಿರುದ್ಧ FIR ದಾಖಲಿಸಲು ಕೋರ್ಟ್ ನಿರ್ದೇಶನ! ಇದೇ ಕಾರಣ
ಬೃಹತ್ ಹೋರ್ಡಿಂಗ್ ಹಾಕುವಲ್ಲಿ ಸಾರ್ವಜನಿಕರ ಹಣ ದುರುಪಯೋಗ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ನವದೆಹಲಿ: ಎಎಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ ಐಆರ್ ದಾಖಲಿಸುವ ರಾಷ್ಟ್ರ ರಾಜಧಾನಿಯ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ನಿರ್ದೇಶನ ನೀಡಿದೆ.
ಬೃಹತ್ ಹೋರ್ಡಿಂಗ್ ಹಾಕುವಲ್ಲಿ ಸಾರ್ವಜನಿಕರ ಹಣ ದುರುಪಯೋಗ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.
ದೆಹಲಿಯ ಆಸ್ತಿ ವಿರೂಪಗೊಳಿಸುವಿಕೆ ಕಾಯ್ದೆ 2007 ರ ಸೆಕ್ಷನ್ 3 ಮತ್ತಿತರ ಅಪರಾಧದಡಿ ತಕ್ಷಣವೇ ಎಫ್ಐಆರ್ ದಾಖಲಿಸಲು ಸಂಬಂಧಿಸಿದ SHO ಗೆ ನಿರ್ದೇಶಿಸಲಾಗಿದೆ ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನೇಹಾ ಮಿತ್ತಲ್ ಹೇಳಿದ್ದಾರೆ.
ಕೇಜ್ರಿವಾಲ್, ಆಗಿನ ಮಟಿಯಾಲಾ ಶಾಸಕ ಗುಲಾಬ್ ಸಿಂಗ್ (ಎಎಪಿ) ಮತ್ತು ಆಗಿನ ದ್ವಾರಕಾ ಎ ವಾರ್ಡ್ ಕೌನ್ಸಿಲರ್ ನಿತಿಕಾ ಶರ್ಮಾ ಅವರು ವಿವಿಧ ಸ್ಥಳಗಳಲ್ಲಿ ಬೃಹತ್ ಗಾತ್ರದ ಹೋರ್ಡಿಂಗ್ ಹಾಕುವ ಮೂಲಕ ಉದ್ದೇಶಪೂರ್ವಕವಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ" ಎಂದು 2019 ರಲ್ಲಿ ಸಲ್ಲಿಸಲಾದ ದೂರಿನಲ್ಲಿ ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



