ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಗ್ಯಾಸ್ ಟ್ಯಾಂಕರ್: ಏಳು ಮಂದಿ ಸಾವು
ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಮತ್ತು ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರು ಗಾಯಗೊಂಡು ನಂತರ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಧಾರ್ ಎಸ್‌ಪಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಧಾರ್: ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ಗ್ಯಾಸ್ ಟ್ಯಾಂಕರ್ ಎರಡು ನಾಲ್ಕು ಚಕ್ರಗಳ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಬದ್ನವರ್-ಉಜ್ಜಯಿನಿ ಹೆದ್ದಾರಿಯ ಬಮನ್ಸುತಾ ಗ್ರಾಮದ ಬಳಿಯ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ತಪ್ಪಾದ ಕಡೆಯಿಂದ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಮತ್ತು ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರು ಗಾಯಗೊಂಡು ನಂತರ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಧಾರ್ ಎಸ್‌ಪಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಮಾಹಿತಿ ಪಡೆದ ಹಿರಿಯ ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗೆ ಸ್ಥಳಕ್ಕೆ ಧಾವಿಸಿದರು. ಸ್ಥಳೀಯ ನಿವಾಸಿಗಳು ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದರು, ಈ ಸಮಯದಲ್ಲಿ ಕ್ರೇನ್ ಬಳಸಿ ವಾಹನಗಳಲ್ಲಿ ಸಿಲುಕಿದ್ದ ಜನರನ್ನು ಹೊರತೆಗೆಯಲಾಯಿತು ಎಂದು ಎಸ್‌ಪಿ ಹೇಳಿದರು.
ಗಾಯಾಳುಗಳನ್ನು ನೆರೆಯ ರತ್ಲಂ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಯಿತು. ಮೃತಪಟ್ಟವರು ಮತ್ತು ಗಾಯಗೊಂಡವರು ಮಧ್ಯ ಪ್ರದೇಶದ ರತ್ಲಂ, ಮಂಡ್ಸೌರ್ ಮತ್ತು ರಾಜಸ್ಥಾನದ ಜೋಧ್‌ಪುರ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ.
ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


