ಪಶ್ಚಿಮ ಬಂಗಾಳ: ಮೂರು ರಿಕ್ಷಾಗಳಿಗೆ ಕಾರು ಡಿಕ್ಕಿ; ಭೀಕರ ಸರಣಿ ಅಪಘಾತದಲ್ಲಿ ಏಳು ಮಂದಿ ಸಾವು
ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನ ಗಾಯಗೊಂಡಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಶುಕ್ರವಾರ ವೇಗವಾಗಿ ಬಂದ ಕಾರೊಂದು ಮೂರು ಇ-ರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಪ್ರಾ ಪ್ರದೇಶದ ಲಕ್ಷ್ಮಿಗಚ್ಛಾದಲ್ಲಿ ಈ ಅಪಘಾತ ಸಂಭವಿಸಿದೆ. ಆಟೋದಲ್ಲಿದ್ದವರು ಮುಂಬರುವ ಈದ್ ಹಬ್ಬಕ್ಕಾಗಿ ಶಾಪಿಂಗ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎದುರು ಬದಿಯಿಂದ ವೇಗವಾಗಿ ಬಂದ ಎಸ್ ಯುವಿ ಕಾರು, ಮೂರು ಇ-ರಿಕ್ಷಾಗಳಿಗೆ ಒಂದರ ನಂತರ ಒಂದರಂತೆ ಡಿಕ್ಕಿ ಹೊಡೆದ ಪರಿಣಾಮ ಆಟೋಗಳಲ್ಲಿದ್ದ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಪಘಾತದ ನಂತರ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವ ಕಾರಿನ ಚಾಲಕನಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



