ಇಬ್ಬರು ಟೀನೇಜ್ ಬಾಲಕರಿಂದ 15 ವರ್ಷದ ಯುವತಿ ಮೇಲೆ ಅತ್ಯಾಚಾರ, ಕೊಲೆ!
ಗುರುವಾರ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ, ಆಕೆಯ ಕುಟುಂಬ ಧಾರ್ಮಿಕ ಕಾರ್ಯಕ್ರಮಕ್ಕೆ ಹಾಜರಾಗಲು ಹೋಗಿದ್ದಾಗ ಈ ಘಟನೆ ನಡೆದಿದೆ.

ಜೈಪುರ: ಇಬ್ಬರು ಟೀನೇಜ್ ಹುಡುಗರು 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದಿರುವ ಘಟನೆ ರಾಜಸ್ಥಾನದ ದೀಗ್ ಜಿಲ್ಲೆಯಲ್ಲಿ ವರದಿಯಾಗಿದೆ. ಸಂತ್ರಸ್ತೆಯ ಕುಟುಂಬ ತಮ್ಮ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಆರೋಪಿಗಳ ವಿರುದ್ಧ ದೂರು ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ, ಆಕೆಯ ಕುಟುಂಬ ಧಾರ್ಮಿಕ ಕಾರ್ಯಕ್ರಮಕ್ಕೆ ಹಾಜರಾಗಲು ಹೋಗಿದ್ದಾಗ ಈ ಘಟನೆ ನಡೆದಿದೆ. ಕುಟುಂಬಸ್ಥರು ಮನೆಗೆ ಹಿಂತಿರುಗಿದಾಗ, ಬಾಲಕಿ ಪ್ರಜ್ಞಾಹೀನಳಾಗಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಆಕೆ ಸಾವನ್ನಪ್ಪಿರುವುದಾಗಿ ಘೋಷಿಸಲಾಯಿತು. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಮರಣೋತ್ತರ ಪರೀಕ್ಷೆಯ ವರದಿಯ ನಂತರ ನಿಖರವಾದ ಕಾರಣ ತಿಳಿದುಬರಲಿದೆ ಎಂದು ಖೋಹ್ ಎಸ್‌ಎಚ್‌ಒ ಮಹೇಂದ್ರ ಶರ್ಮಾ ತಿಳಿಸಿದ್ದಾರೆ.
ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್‌ಎಚ್‌ಒ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



