ವಿವಾದಾತ್ಮಕ ಹೇಳಿಕೆಗೆ ಆಕ್ರೋಶ: ಉತ್ತರಾಖಂಡ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ರಾಜೀನಾಮೆ
ಪ್ರೇಮ್‌ಚಂದ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದಿತ್ತು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಡೆಹ್ರಾಡೂನ್: ಅಚ್ಚರಿಯ ಘಟನೆಯೊಂದರಲ್ಲಿ, ಉತ್ತರಾಖಂಡ ಹಣಕಾಸು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಗರ್ವಾಲ್ ಅವರು ಅಜಾಗರೂಕತೆಯಿಂದ ಬೆಟ್ಟದ ನಿವಾಸಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ರಾಜೀನಾಮೆ ನೀಡಲಾಗಿದೆ.
ಪ್ರೇಮ್‌ಚಂದ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದಿತ್ತು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಅಗರ್ವಾಲ್ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಸಲ್ಲಿಸುವ ಮುನ್ನ ಭಾರವಾದ ಹೃದಯದಿಂದ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ಅವರು, "ನನ್ನ ಮಾತುಗಳು ಮತ್ತು ಅದರ ಪರಿಣಾಮಕ್ಕೆ ನಾನು ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ" ಎಂದು ಹೇಳಿದರು.
"ರಾಜ್ಯದ ಎಲ್ಲಾ ನಿವಾಸಿಗಳ ಪ್ರೀತಿ ಮತ್ತು ಆಶೀರ್ವಾದಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ". ಈ ಬೆಂಬಲದ ಹೊರತಾಗಿಯೂ, ರಾಜ್ಯದಲ್ಲಿ ಸೃಷ್ಟಿಯಾಗಿರುವ ವಾತಾವರಣದಿಂದ ನನಗೆ ತೀವ್ರ ಬೇಸರವಾಗಿದೆ" ಎಂದು ಅವರು ಭಾವುಕರಾಗಿ ಹೇಳಿದರು.
ಅಗರ್ವಾಲ್ ಅವರ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದ್ದು, ಅವರ ವಿವಾದಾತ್ಮಕ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ಮತ್ತು ಟ್ರೋಲಿಂಗ್‌ಗೆ ಕಾರಣವಾಗಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ಅಗರ್ವಾಲ್ ಅಲವು ಹಲವು ಬಾರಿ ಕ್ಷಮೆಯಾಚಿಸಿದರು. ವಿಧಾನಸಭಾ ಅಧಿವೇಶನದ ಸಮಯದಲ್ಲಿಯೂ ಒಂದು ಬಾರಿ ಕ್ಷಮೆಯಾಚಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



